ಚಿಕ್ಕಮಗಳೂರು: ಇಂದು ಬೆಳಿಗ್ಗೆ ಚಾರ್ಮಡಿ ಘಾಟ್ ನಲ್ಲಿ ತೆರಳುತ್ತಿದ್ದ ಜನರಿಗೆ ಗಜರಾಜನ ದರ್ಶನವಾಗಿದೆ. ಚಾರ್ಮಡಿ ಘಾಟ್ ನ ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ ಸೊಂಡಿಲಿನಲ್ಲಿ ಮರದ ದಿಂಬಿ ಹಿಡಿದು ನಿಂತಿದ್ದನು. ಗಜರಾಜನ ಈ ಅವತಾರ ಕಂಡು ಜನರು ವಾಹನಗಳನ್ನು ಸೈಡ್ ಅಲ್ಲಿ ಪಾರ್ಕ್ ಮಾಡಿ, ಮೊಬೈಲ್ ನಲ್ಲಿ ಆನೆಯ ಆರ್ಭಟವನ್ನು ಸೆರೆ ಹಿಡಿದಿದ್ದಾರೆ.
ಈ ಒಂಟಿ ಸಲಗಕ್ಕೆ ಒಂಟಿ ಸಲಗಕ್ಕೆ ಮದವೇರಿರುವ ಶಂಕೆ ವ್ಯಕ್ತವಾಗಿದೆ. ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ ನಿಂತಿದ್ದರಿಂದ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇನ್ನು ಈ ಒಂಟಿ ಸಲಗ ಹಗಲು-ರಾತ್ರಿ ಎನ್ನದೆ ಉಪಟಳ ನೀಡುತ್ತಿದೆ. ಆದರೂ ಕೂಡ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296