ತುಮಕೂರು: ಜಿಲ್ಲೆಯ ತಿಪಟೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಗ್ರಾಣದಲ್ಲಿರುವ ಅನುಪಯುಕ್ತ ಸಾಮಗ್ರಿಗಳನ್ನು ನವೆಂಬರ್ 5 ರಂದು ಮಧ್ಯಾಹ್ನ 11:30 ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಬಿಡ್ಡುದಾರರು ನವೆಂಬರ್ 5ರೊಳಗೆ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತಿಪಟೂರು ಇವರ ಹೆಸರಿನಲ್ಲಿ 5000 ರೂ. ಡಿಡಿ ಅಥವಾ ನಗದು ರೂಪದಲ್ಲಿ ಮುಚ್ಚಿದ ಲಕೋಟೆಯಲ್ಲಿ ಭದ್ರತಾ ಠೇವಣಿಯನ್ನು ಸಲ್ಲಿಸುವ ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296