ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ ,ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಕ್ಕಳೊಂದಿಗೆ ಮುಕ್ತ ಸಂವಾದ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಕೆ.ಟಿ.ತಿಪ್ಪೇಸ್ವಾಮಿ ಅವರು ಭಾಗವಹಿಸಿ ಮಾತನಾಡಿ, ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಎಂ.ಆರ್.ರವಿ, ಜಿಲ್ಲಾಧಿಕಾರಿಗಳಾದ ಡಾ.ಎಂ.ಎಸ್. ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಸ್.ಶ್ವೇತಾ, ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ ಉಂಕಿ ಹಾಗೂ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx