ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ನಾತಕ/ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ(General & I.T) ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್. ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶ ಪಡೆಯಲು ಮಾರ್ಚ್ 31 ಕಡೆಯ ದಿನವಾಗಿದೆ.
ಪ್ರಥಮ ವರ್ಷದ ಪ್ರವೇಶಾತಿಗಾಗಿ ಬಿ.ಎ. ತರಗತಿಗೆ 8400 ರೂ., ಬಿ.ಕಾಂ.–8900 ರೂ., ಬಿ.ಸಿ.ಎ/ಬಿ.ಎಸ್ಸಿ.–23900 ರೂ., ಬಿ.ಬಿ.ಎ./ಬಿ.ಎಲ್.ಐ.ಎಸ್ಸಿ/ಎಂ.ಕಾಂ.–12400 ರೂ., ಬಿ.ಎಸ್. ಡಬ್ಲ್ಯೂ.–12900 ರೂ., ಎಂ.ಎ.–10600 ರೂ., ಎಂ.ಸಿ.ಜೆ.–16200,. ಎಂ.ಬಿ.ಎ.–29900, ಎಂ.ಎಸ್ಸಿ./ಎಂ.ಸಿ.ಎ.-29700, ಎಂ.ಎಸ್. ಡಬ್ಲ್ಯೂ-.-21300, ಎಂ.ಎಲ್.ಐ.ಎಸ್ಸಿ.–18150 ರೂ.ಗಳ ಶುಲ್ಕ ನಿಗದಿಪಡಿಸಲಾಗಿದೆ.
ಪದವಿಪೂರ್ವ ಹಾಗೂ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ ಲೇಔಟ್, ರಾಜೀವ್‌ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ಅಥವಾ ದೂರವಾಣಿ ಸಂಖ್ಯೆ- 0816-2955580, ಮೊ.ಸಂ. 9844506629/ 9886112434/ 7349474339ನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕ ಡಾ: ಲೋಕೇಶ. ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4