ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದ್ದು, ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಸೆಪ್ಟೆಂಬರ್ 15 ಕೊನೆಯ ದಿನಾಂಕ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಂಜೂರಾಗುವ ಶುಲ್ಕ ಪಾವತಿ ಸೌಲಭ್ಯದಡಿ ಕರಾಮುವಿಯ ಈ ಮೇಲ್ಕಂಡ ಕೋರ್ಸ್ ಗಳಿಗೆ ಸೇರ ಬಯಸುವ ಅಲ್ಪಸಂಖ್ಯಾತ ವರ್ಗದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧಿಸ್ಟ್ ಮತ್ತು ಪಾರ್ಸಿ) ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಂತರ್ಜಾಲ https://dom.karnataka.gov.in ದಲ್ಲಿರುವ ಕರಾಮುವಿಯ ಪ್ರವೇಶಾತಿ ಪೋರ್ಟಲ್ ಲಿಂಕ್ https://minority.ksouportal.com ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಿ ನೇರವಾಗಿ ಅಗತ್ಯ ದಾಖಲಾತಿಗಳೊಂದಿಗೆ ಹತ್ತಿರದ ಕರಾಮುವಿಯ ಅಧಿಕೃತ ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯೇ ಪೂರ್ಣ ಪ್ರವೇಶಾತಿ ಶುಲ್ಕ ಭರಿಸಲಿದೆ.
ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC