ಯುದ್ಧಪೀಡಿತ ಉಕ್ರೇನ್‍ನಿಂದ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಕಾರ್ಯಾಚರಣೆಗಿಳಿಯುವಂತೆ ಪ್ರಧಾನಿ ನರೇಂದ್ರಮೋದಿ ಭಾರತೀಯ ವಾಯುಸೇನೆಗೆ ಸೂಚನೆ ನೀಡಿದ್ದಾರೆ.
ಕಳೆದ ಗುರುವಾರದಿಂದ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ್ದು, ಯುದ್ದ ಆರಂಭವಾಗಿದೆ. ಉಕ್ರೇನ್‍ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ವಾಪಸ್ ಕರೆತರಲು ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೂ ಖಾಸಗಿ ವಿಮಾನಗಳನ್ನು ಬಳಕೆ ಮಾಡಿ ಆಪರೇಷನ್ ಗಂಗಾ ನಡೆಸಲಾಗುತ್ತಿದೆ.
ಉಕ್ರೇನ್‍ನಲ್ಲಿ ಪರಿಸ್ಥಿತಿ ದಿನೇ ದಿನೇ ವಿಳಂಬ ಮಾಡುವುದು ಅಪಾಯಕಾರಿ ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಾಯುಸೇನೆಗೆ ಈ ಸೂಚನೆ ನೀಡಿದ್ದು, ಇಂದಿನಿಂದಲೇ ಸಿ-17 ವಿಮಾನಗಳ ಮೂಲಕ ಸೇನೆ ಕಾರ್ಯಾಚರಣೆಗಿಳಿಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB