nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    ಜಿಲ್ಲಾ ಸುದ್ದಿ November 9, 2025

    ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!

    By adminNovember 9, 2025No Comments2 Mins Read
    sargur

    ಸರಗೂರು: ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮೂವರನ್ನು ಬಲಿಪಡೆದಿರುವ ಹುಲಿಯ ಸೆರೆಗೆ ಶನಿವಾರವೂ ಕಾರ್ಯಾಚರಣೆ ಮುಂದುವರಿದಿದ್ದು, ಕಾಡಿನೊಳಗೆ ಸುಮಾರು 7 ಕಿ.ಮೀ. ದೂರದಲ್ಲಿ ಡ್ರೋನ್‌ ಕ್ಯಾಮೆರಾಗೆ ಹುಲಿಯೊಂದು ಸೆರೆಯಾಗಿದೆ.

    ತಾಲೂಕಿನ ಹಳೇಹೆಗ್ಗುಡಲು ಬಳಿಯ ಜಮೀನಿಲ್ಲಿ ಮೂರನೇ ಬಲಿ ಪಡೆದ ಹುಲಿಗಾಗಿ ಅರಣ್ಯ ಇಲಾಖೆ ಹಗಲು ರಾತ್ರಿ ಎನ್ನದೆ ತೀವ್ರ ಶೋಧ ಆರಂಭಿಸಿದ್ದು, ಸಾಕಾನೆಗಳಾದ ಭೀಮಾ, ಮಹೇಂದ್ರ, ಲಕ್ಷ್ಮಣ, ಶ್ರೀಕಂಠ ಮೂಲಕ ಶನಿವಾರ ಮುಂಜಾನೆಯಿಂದಲೂ ಶೋಧ ಆರಂಭಿಸಿದೆ.


    Provided by
    Provided by

    ಆದರೂ ಹುಲಿಯ ಗುರುತು ಪತ್ತೆಯಾಗಲಿಲ್ಲ. ಬಳಿಕ ಡ್ರೋನ್‌ ಕ್ಯಾಮೆರಾ ಮೂಲಕ ಕಾರ್ಯಾಚರಣೆ ನಡೆಸುವ ವೇಳೆ ಕಾಡಿನ ಒಳಭಾಗದಲ್ಲಿ ಸುಮಾರು 7 ಕಿ.ಮೀ. ಅಂತರದಲ್ಲಿ ಹುಲಿಯೊಂದರ ಚಿತ್ರ ಸೆರೆಯಾಗಿದೆ ಎನ್ನಲಾಗಿದೆ.

    ಸದ್ಯ ಕಾರ್ಯಾಚರಣೆಗೆ ಸಿಬ್ಬಂದಿಯ ಸಂಖ್ಯೆ ಹೆಚ್ಚಿಸುವ ಸಲುವಾಗಿ ಮೈಸೂರು ಪ್ರಾದೇಶಿಕ ವಲಯದಿಂದಲೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದು, 100ಕ್ಕೂ ಅಧಿಕ ಮಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಹುಲಿಗಾಗಿ ಶೋಧ ಮುಂದುವರಿಸಿದ್ದಾರೆ.

    ಇನ್ನೊಂದು ಕಡೆ ಕಾರ್ಯಾಚರಣೆ:

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ವ್ಯಾಪ್ತಿಯಲ್ಲಿ ಮೂರು ಅರಣ್ಯ ವಲಯಗಳಲ್ಲಿ ಶನಿವಾರ ದಂದು ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಯಿತು.   ತಾಲೂಕಿನ ಬೆಣ್ಣೆಗೆರೆ ಗ್ರಾಮದ ಜಮೀನಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಾರ್ಯಾಚರಣೆಗೆ ‘ವಾಕ್ ಥ್ರೂ ಕೇಜ್’ ಎಂಬ ವಿಶೇಷ ಬೋನ್. ಈ ಬೋನ್‌ ಗೆ ಹುಲಿ ಕಾಲಿಟ್ಟ ಕೂಡಲೇ ಎರಡು ಕಡೆಯಿಂದ ಬಾಗಿಲು ಬಿದ್ದು ಹುಲಿಯನ್ನು ಸೆರೆ ಹಿಡಿಯುವ ತಂತ್ರಜ್ಞಾನವನ್ನು ಹೊಂದಿರುವ ಬೋನ್ ಇರಿಸಲಾಗಿದೆ. ಇದಲ್ಲದೆ ಅರಣ್ಯ ಇಲಾಖೆ ಸಿಬ್ಬಂದಿಗಳು, ಕಾಡಾನೆಗಳಾದ ಭೀಮ, ಮಹೇಂದ್ರ, ಲಕ್ಷ್ಮಣ, ಶ್ರೀಕಂಠ ಆನೆಗಳನ್ನು ಬಳಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾರ್ಯಾಚರಣೆಯಲ್ಲಿ ಸಿಎಫ್ ಪ್ರಭಾಕರನ್, ಎಸಿಎಫ್ ಡಿ.ಪರಮೇಶ್, ಡಾ.ರಮೇಶ್, ಡಾ.ವಾಸೀಂ ಮಿರ್ಜ್, ನುಗು ಆರ್‌ ಎಫ್‌ ಒ ವಿವೇಕ್, ಮೋಳೆಯೂರು ವಲಯ ಅಮೃತ ಮಾಯಪ್ಪ, ಸೇರಿದಂತೆ 130 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

    ಇದಲ್ಲದೆ ನಂಜನಗೂಡು ತಾಲೂಕಿನ ಹೊಸವೀಡು ಕಾಲನಿಯಲ್ಲಿಯೂ ಎರಡು ಹುಲಿ ಕಾಣಿಸಿಕೊಂಡ ಬೆನ್ನಲ್ಲೆ ಬುಧವಾರ ಒಂದು ಹೆಣ್ಣು ಹುಲಿ ಸೆರೆ ಹಿಡಿದ ಇಲಾಖೆ ಮತ್ತೊಂದು ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಯಿತು.

    ಓಂಕಾರ ವಲಯ ಅರಣ್ಯದಂಚಿನ ನಾಗನಾಣಪುರ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡ ವಿಷಯ ತಿಳಿದ ಕೂಡಲೇ ಎಸಿಎಫ್ ಡಿ.ಪರಮೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೂಂಬಿಂಗ್ ನಡೆಸಿದರು.

    ಮೊಳೆಯೂರಲ್ಲಿ ಕೂಂಬಿಂಗ್: ಕೂಡಗಿ ಗ್ರಾಮದ ರೈತನನ್ನು ಬಲಿ ಪಡೆದ ಹುಲಿ ಸೆರೆಗೆ ಮೊಳೆಯೂರು ವಲಯದ ಅರಣ್ಯಾಧಿಕಾರಿಗಳು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ  ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು. ಇದಲ್ಲದೆ ಬಾಳಗಂಚಿ ಅರಣ್ಯ ಪ್ರದೇಶದ ತೆಲಗುಮಸಹಳ್ಳಿ, ಕಾಟವಾಳು, ದೇವಲಾಪುರ, ದೇವಲಾಪುರ ಶೆಡ್ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದ್ದ ಎಂಬ ವಿಷಯ ತಿಳಿದು ಸಿಬ್ಬಂದಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು. ಆರ್‌ ಎಫ್‌ ಒ ಅಮೃತ ಎ ಮಾಯಪ್ಪ, 100 ಕ್ಕೂ ಹೆಚ್ಚು ಸಿಬ್ಬಂದಿಗಳು ಹಾಜರಿದ್ದರು.

    ಮಧ್ಯಾಹ್ನದ ವೇಳೆ ಓಂಕಾರ್‌ ವಲಯದ ಬೇಗೂರು ಯಡವನಳ್ಳಿ ಬಳಿ ಅರಣ್ಯ ವೀಕ್ಷಕನ ಮೇಲೆ ಚಿರತೆಯೊಂದು ದಾಳಿ ಮಾಡಿದ್ದು, ಸ್ಥಳಕ್ಕೆ ಸಾಕಾನೆಗಳನ್ನು ರವಾನಿಸಿ ಅಲ್ಲಿಯೂ ಕೂಂಬಿಂಗ್‌ ಆರಂಭಿಸಲಾಗಿದೆ.  ಸ್ಥಳದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಕಾರವಾರ: ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಆಯೋಜಿಸಿರುವ…

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.