ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ. ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಡಿ.ಎನ್.ಎಯು ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ ಎಂದು ಆರೋಪಿಸಿದರು.
370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ.ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿ.ಕೆ.ಶಿವಕುಮಾರರು ಟಿ.ವಿ. ಸಂದರ್ಶನದಲ್ಲಿ ಸಂವಿಧಾನ ಬದಲಿಸುವ ಮಾತನಾಡಿದ್ದಾರೆ. ಕಾಂಗ್ರೆಸ್ಸನ್ನು ಕಿತ್ತೊಗೆದು ನಾವು ಸಂವಿಧಾನ ಉಳಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4