ಬಿಬಿಎಂಪಿ ದಾಸರಹಳ್ಳಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕಚೇರಿ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
‘ಈ ಕಚೇರಿ ಸ್ಥಳಾಂತರಿಸಬಾರದು ಎಂದು ಮಾಜಿ ಶಾಸಕ ಆರ್. ಮಂಜುನಾಥ್ ಪತ್ರ ಬರೆದಿದ್ದರೂ ಪ್ರಯೋಜನವಾಗಿಲ್ಲ’ ಎಂದು ವಿನಾಯಕ ಭಟ್ ನೇತೃತ್ವದಲ್ಲಿ ಸ್ಥಳೀಯರು ಶನಿವಾರ ದಾಸರಹಳ್ಳಿ ವಲಯದ ಜಂಟಿ ಆಯುಕ್ತರಿಗೆ ಮನವಿ ಸಲ್ಲಿಸಿದರು.
‘ಶಾಸಕ ಆರ್. ಮುನಿರಾಜು ಅವರ ಕಚೇರಿಗೆ ಹತ್ತಿರವಾಗುತ್ತದೆ ಎಂಬ ಕಾರಣಕ್ಕೆ ಎಚ್‌ಎಂಟಿ ಬಡಾವಣೆಯಿಂದ ಸ್ಥಳಾಂತರಿಸಲು ಮುಂದಾಗಿದ್ದಾರೆ. ಈಗ ವಿಶಾಲವಾದ ಕಟ್ಟಡದಲ್ಲಿ ತೊಂದರೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿದೆ.
ಮೇಲಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಕೆಲವೊಂದು ಗುತ್ತಿಗೆದಾರರು ದಾರಿ ತಪ್ಪಿಸಿ, ಈ ಕಚೇರಿಯನ್ನು ಅಧೀಕ್ಷಕ ಎಂಜಿನಿಯರ್ ಕಚೇರಿಗೆ ಸ್ಥಳಾಂತರಿಸುವಂತೆ ಮಾಡುತ್ತಿದ್ದಾರೆ’ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಈ ಕಚೇರಿಯನ್ನು ಪ್ರಸ್ತುತ ಇರುವಲ್ಲಿಯೇ ಮುಂದುವರಿಸಬೇಕು. ಸ್ಥಳಾಂತರಕ್ಕೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


