ತುಮಕೂರು: ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಿನಾಂಕ: 11.06.2025 ರಿಂದ 14.06.2025ರವರೆಗೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ 64.5 ರಿಂದ 204. 5ಮಿಮೀ ನಷ್ಟು ಭಾರಿ ಪ್ರಮಾಣದಲ್ಲಿ ಗುಡುಗು–ಸಿಡಿಲು ಸಹಿತ ಗಾಳಿ–ಮಳೆ ಇರುವ ಸಾಧ್ಯತೆಯಿರುವುದರಿಂದ ಜಿಲ್ಲೆಗೆ “ಆರೆಂಜ್ ಮತ್ತು ಯೆಲ್ಲೋ ಅಲರ್ಟ್” ಘೋಷಿಸಲಾಗಿದೆ.
ಅದರಂತೆ, ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ತುಮಕೂರು ರವರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಲು ಈ ಕೆಳಗಿನಂತೆ ಸೂಚಿಸಿರುತ್ತಾರೆ.
ಸಾರ್ವಜನಿಕ ಮನವಿ:
- ಸಿಡಿಲು ಸಹಿತ ಮಳೆಯಾಗುವುದರಿಂದ, ರಾಜ್ಯದಿಂದ ಸಿಡಿಲು ಬಡಿಯುವ ಪ್ರದೇಶದ ಸಾರ್ವಜನಿಕರಿಗೆ ಮುಂಚಿತವಾಗಿ ರವಾನಿಸುವ SMS Alert ನಂತೆ
- ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚು ಎಚ್ಚರದಿಂದಿರಬೇಕು.
- ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶದಲ್ಲಿರುವುದು.
- ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು.
- ಲೋಹದ ತಗಡು ಹೊಂದಿರುವ ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರುವುದು.
- ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸದಿರಿ
- ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡುವುದು.
- ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರುವುದು.
- ನದಿ/ಹಳ್ಳದ/ಕೆರೆ ದಡದಲ್ಲಿ/ಅಪಾಯಕಾರಿಯಾಗಿ ಹರಿಯುವ ನೀರಿನಲ್ಲಿ ಬಟ್ಟೆ ತೊಳಿಯುವುದು, ಈಜಾಡುವುದು, ದನ/ಕರುಗಳನ್ನು ತೊಳೆಯುವುದು, ಪೋಟೋ/ಸೆಲ್ಫಿಗಳನ್ನು ತೆಗೆಯುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆಗಳು ನಡೆಸದಂತೆ ಎಚ್ಚರವಹಿಸುವುದು.
- ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ/ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸುವುದು.
- ದುರ್ಬಲ ಮಣ್ಣಿನ ಮನೆ/ಕಟ್ಟಡಗಳು, ದುರ್ಬಲ ಮರದ ಕೊಂಬೆಗಳು, ಜಲಕಾಯ/ವಿದ್ಯುತ್ ವಸ್ತುಗಳಿಂದ ದೂರವಿರುವುದು.
- ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರುಸುವುದು.
- ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳುವುದು.
- ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡುಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಾಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಚಾವಣಿ ಬಿದ್ದದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಈ ಕೆಳಕಂಡ ಸಹಾಯವಾಣಿಗೆ ಕರೆಮಾಡಲು ತಿಳಿಸಲಾಗಿದೆ.
- 7304975519
- 0816-2213400
- 155304
- Bescom: 1912; 8277884019 (Whatsapp)
ಅಧಿಕಾರಿಗಳಿಗೆ ಸೂಚನೆ:
- ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು, ಪ್ರವಾಹ/ಭಾರೀ ಮಳೆಯಿಂದ ಯಾವುದೇ ಜನ-ಜಾನುವಾರು ಜೀವಹಾನಿಯಾಗದಂತೆ ಮುಂಜಾಗ್ರತೆ ವಹಿಸುವುದು.
- ಭಾರೀ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರುವುದು/ ಮೈಕ್ ಮೂಲಕ ಹಾನಿಗೀಡಲು ಸಾಧ್ಯತೆಯಿರುವ ಪ್ರದೇಶದ ಜನರಿಗೆ ಜಾಗೃತಿ ಮೂಡಿಸುವುದು
- ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ/ಕಟ್ಟಡಗಳು, ದುರ್ಬಲ ಮರದ ಕೊಂಬೆಗಳು, ಜಲಕಾಯ/ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸುವಂತೆ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡುವುದು.
- ಶಾಲೆ/ಅಂಗನವಾಡಿ ಮೇಲ್ಚಾವಣಿ/ಗೋಡೆಗಳ ಸುಸ್ಥಿತಿ ಪರಿಶೀಲಿಸುವುದು.
5.ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸುವುದು.
- ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/Underpasses/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸುವುದು.
- ಅರ್ಹ ಪ್ರಕರಣಗಳಿಗೆ ನಿಯಮಾನುಸಾರ ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ತುರ್ತು ಪರಿಹಾರ ನೀಡುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW