nammatumakuru

    Subscribe to Updates

    Get the latest creative news from FooBar about art, design and business.

    What's Hot

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು

    May 19, 2026

    ಗುಜರಾತ್ ಮಾದರಿ ನಮಗೆ ಬೇಡ,  ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

    May 19, 2026
    Facebook Twitter Instagram
    ಟ್ರೆಂಡಿಂಗ್
    • “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
    • ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
    • ಗುಜರಾತ್ ಮಾದರಿ ನಮಗೆ ಬೇಡ,  ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
    • ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
    • ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
    • ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
    • ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    ರಾಜ್ಯ ಸುದ್ದಿ May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    By adminMay 6, 2026No Comments2 Mins Read
    tai

    ಶಿರಾ: ಅಪಘಾತ ಅಥವಾ ತುರ್ತು ಆರೋಗ್ಯ ಸಮಸ್ಯೆ ಎದುರಾದಾಗ ವೈದ್ಯರು ಸಿಗುವ ಮೊದಲೇ ಸ್ಥಳೀಯರೇ ಅಥವಾ ಮನೆಯವರೇ ಅರೆಕಾಲಿಕ ವೈದ್ಯರಾಗಿ ಜೀವ ಉಳಿಸುವ ಮಹತ್ವದ ‘ತಾಯಿ’ (TAI — Tamil Nadu Accident Emergency Initiative) ಯೋಜನೆ ಈಗ ತುಮಕೂರು ಜಿಲ್ಲೆಯಲ್ಲಿ ಸದ್ದಿಲ್ಲದೆ ಜಾರಿಯಾಗುತ್ತಿದೆ. ಹೆಸರಾಂತ ವೈದ್ಯ ಡಾ. ಎಂ.ಆರ್. ಹುಲಿನಾಯ್ಕರ್ ಅವರ ನೇತೃತ್ವದಲ್ಲಿ ಈ ವಿಶಿಷ್ಟ ಆರೋಗ್ಯ ತರಬೇತಿ ಕಾರ್ಯಕ್ರಮಕ್ಕೆ ಶಿರಾದಲ್ಲಿ ಚಾಲನೆ ನೀಡಲಾಗಿದೆ.

    ತಮಿಳುನಾಡಿನಲ್ಲಿ ಯಶಸ್ವಿಯಾಗಿರುವ ಈ ಮಾದರಿಯನ್ನು ಈಗ ತುಮಕೂರು ಜಿಲ್ಲೆಗೆ ಪರಿಚಯಿಸಲಾಗುತ್ತಿದೆ. ಶಿರಾದ ತಾಯಿ–ಮಗು ಆರೈಕೆ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯೋಜನೆಯ ಉಸ್ತುವಾರಿ ಡಾ. ರಾಮ್ ಕೆ. ನಾಯರ್ ಪ್ರಾಸ್ತಾವಿಕವಾಗಿ ಮಾತನಾಡಿದರು. “ಆಸ್ಪತ್ರೆಗೆ ತಲುಪುವ ಮೊದಲಿನ ‘ಗೋಲ್ಡನ್ ಅವರ್’ (Golden Hour) ಅತ್ಯಂತ ನಿರ್ಣಾಯಕ. ಈ ಸಮಯದಲ್ಲಿ ಸ್ಥಳೀಯರು ಸೂಕ್ತ ತರಬೇತಿ ಪಡೆದಿದ್ದರೆ ಸಾವು-ನೋವಿನ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಬಹುದು,” ಎಂದು ಅವರು ತಿಳಿಸಿದರು.


    Provided by
    Provided by

    ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಕನಿಷ್ಠ 500 ಜನರಿಗೆ ತುರ್ತು ಚಿಕಿತ್ಸಾ ತರಬೇತಿ ನೀಡುವ ಗುರಿ ಹೊಂದಲಾಗಿದೆ. ವಿಡಿಯೋ, ಆಡಿಯೋ, ಚಿತ್ರಗಳು ಹಾಗೂ ಗೊಂಬೆಗಳ (Mannequins) ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

    ಶ್ರೀದೇವಿ ಆಸ್ಪತ್ರೆಯ 20 ನುರಿತ ವೈದ್ಯರು, 20 ಶುಶ್ರೂಷಕರು ಮತ್ತು 10 ಆರೋಗ್ಯ ಕಾರ್ಯಕರ್ತರನ್ನೊಳಗೊಂಡ 50 ಜನರ ತಂಡ ಈ ಜಾಗೃತಿ ಮೂಡಿಸಲಿದೆ. ಹೃದಯಾಘಾತ, ರಸ್ತೆ ಅಪಘಾತ, ಹಾವು ಕಡಿತ, ಪಾರ್ಶ್ವವಾಯು, ನೀರಿನಲ್ಲಿ ಮುಳುಗುವುದು, ಮರದಿಂದ ಬೀಳುವುದು ಹಾಗೂ ತೀವ್ರ ರಕ್ತಸ್ರಾವದಂತಹ ತುರ್ತು ಪರಿಸ್ಥಿತಿಗಳು.

    ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, ರಸ್ತೆ ಅಪಘಾತಗಳಲ್ಲಿ ಅತಿ ಹೆಚ್ಚು ಪ್ರಾಣಹಾನಿ ಸಂಭವಿಸುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಬೆಂಗಳೂರಿನ ನಿಮ್ಹಾನ್ಸ್ ಅಥವಾ ಜಯದೇವ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯಲು ಹೆಚ್ಚಿನ ಸಮಯ ಹಿಡಿಯುವುದರಿಂದ, ತುಮಕೂರಿನಲ್ಲಿಯೇ ಸುಸಜ್ಜಿತ ‘ಟ್ರಾಮಾ ಕೇಂದ್ರ’ ಸ್ಥಾಪಿಸುವ ಉದ್ದೇಶವನ್ನು ಡಾ. ಎಂ.ಆರ್. ಹುಲಿನಾಯ್ಕರ್ ಹೊಂದಿದ್ದಾರೆ ಎಂದು ಡಾ. ರಾಮ್ ಕೆ. ನಾಯರ್ ವಿವರಿಸಿದರು.

    ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್. ಗೌಡ ಮಾತನಾಡಿ, “ಶಿರಾದಲ್ಲಿ ಆರಂಭವಾಗಿರುವ ಈ ಅಭಿಯಾನವು ಮುಂದಿನ ತಿಂಗಳು ಮಧುಗಿರಿಯಲ್ಲಿ ಹಾಗೂ ತದನಂತರ ಜಿಲ್ಲೆಯ ಉಳಿದ ಎಂಟು ತಾಲೂಕುಗಳಲ್ಲಿಯೂ ನಡೆಯಲಿದೆ,” ಎಂದರು. ಹೃದಯಾಘಾತವಾದ ಮೊದಲ ಅರ್ಧ ಗಂಟೆಯೊಳಗೆ ಚಿಕಿತ್ಸೆ ಸಿಗದಿದ್ದರೆ ಹೃದಯದ ರಕ್ತನಾಳಗಳಿಗೆ ಶಾಶ್ವತ ಹಾನಿಯಾಗುವ ಸಂಭವವಿರುತ್ತದೆ ಎಂದು ಅವರು ಎಚ್ಚರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್ ವಹಿಸಿದ್ದರು. ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಈ ‘ತಾಯಿ’ ಯೋಜನೆ ಜಿಲ್ಲೆಯಾದ್ಯಂತ ಭರವಸೆಯ ಕಿರಣವಾಗಿ ಮೂಡಿಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    ರಾಘವೇಂದ್ರ ಅಡಿಗ ಎಚ್ಚೆನ್. ಬಹು ನಿರೀಕ್ಷಿತ  “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ…

    ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು

    May 19, 2026

    ಗುಜರಾತ್ ಮಾದರಿ ನಮಗೆ ಬೇಡ,  ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

    May 19, 2026

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.