ಕೊರಟಗೆರೆ : ನಾಗರಿಕತೆಗಳ ಕಾಲದಿಂದಲೂ ನಮ್ಮ ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಹಸಿ ಕಸ, ಒಣ ಕಸ ವಿಂಗಡಣೆ ಮಾಡಿ ಸ್ವಚ್ಛತಾ ವಾಹನಿಗೆ ನೀಡುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹಂಚಿಹಳ್ಳಿ ಗ್ರಾ.ಪಂ. ಅಧ್ಯಕ್ಷ ಭೀಮರಾಜು ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾ.ಪಂ ವತಿಯಿಂದ ಹಂಚಿಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಸ್ವಚ್ಛತಾ ಹಿ ಸೇವಾ–೨೦೨೫ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಚ್ಛ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ಅನೈರ್ಮಲ್ಯ ನಿವಾರಣೆಗಾಗಿ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಸ್ವಚ್ಛತಾ ಕಾರ್ಯವನ್ನು ನಿರ್ವಹಿಸುವ ಪೌರ ಕಾರ್ಮಿಕರ ಸೇವೆ ನಿಜವಾದ ದೇಶ ಸೇವೆ. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸುಂದರವಾಗಿ ಸ್ವಚ್ಛವಾಗಿಟ್ಟುಕೊಂಡರೆ ನಮ್ಮ ದೇಶವೂ ಸುಂದರವಾಗಿರುತ್ತದೆ ಎಂದು ಹೇಳಿದರು.
ಗ್ರಾ.ಪಂ ಪಿಡಿಓ ರಾಘವೇಂದ್ರ ಮಾತನಾಡಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಭಾರತ ಸರ್ಕಾರದ ‘‘ಸ್ವಚ್ಛತಾ ಹಿ ಸೇವಾ’’ (ಸ್ವಚ್ಛತೆಯೇ ಸೇವೆ) ಅಭಿಯಾನದ ಒಂದು ಭಾಗವಾಗಿದೆ. ದೇಶಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸಲು ಪ್ರತಿ ವರ್ಷ ಸೆ.17ರಿಂದ ಆ.2ರವರೆಗೆ ನಡೆಸಲಾಗುತ್ತದೆ ಎಂದು ಹೇಳಿದರು. ಈ ವೇಳೆ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC