ಔರಾದ: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬೋಸ್ಕೋ ಬೆಂಗಳೂರು ಹಾಗೂ ಡಾನ್ ಬೋಸ್ಕೋ ಬೀದರ್ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕತ್ವ ಯೋಜನೆ ಪಾಲನೆ–ಪೋಷಣೆಯಿಂದ ವಂಚಿತರಾದ ಮಕ್ಕಳಿಗೆ ಸೂಕ್ತ ಪರಿವಾರದ ವ್ಯವಸ್ಥೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಇದರಿಂದ ಮಕ್ಕಳು ಮಾನಸಿಕ, ದೈಹಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಡಾನ್ ಬೋಸ್ಕೋ ಬೀದರ್ ಸಂಸ್ಥೆಯ ಪೋಷಕತ್ವ ಯೋಜನೆ ಜಿಲ್ಲಾ ಸಂಯೋಜಕರಾದ ರಮೇಶ್ ಸೂರ್ಯವಂಶಿ ಹೇಳಿದರು.
ಸೋಮವಾರ ಔರಾದ ತಾಲೂಕಿನ ಅಂಬರೀಶ್ವರ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಳು ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪೋಷಕತ್ವ ಯೋಜನೆ ಕುರಿತು ಕುಲಂಕುಶವಾಗಿ ಮಾಹಿತಿಯನ್ನು ನೀಡಲಾಯಿತು. ಪೋಷಕತ್ವ ಯೋಜನೆಯ ಲಾಭ ಅರ್ಹ ಮಕ್ಕಳಿಗೆ ದೊರೆಯಬೇಕಾದರೆ ಕಾಲೇಜಿನ ವಿದ್ಯಾರ್ಥಿಗಳ ಪಾತ್ರ ಏನು ಎಂಬುದರ ಬಗ್ಗೆ ಮಾಹಿತಿ ನೀಡಲಾಯಿತು ಮತ್ತು ತಾವು ತಮ್ಮ ತಮ್ಮ ಊರುಗಳಲ್ಲಿ ಹೋಗಿದ್ದಾಗ ಇಂಥ ಪ್ರಕರಣಗಳು (ತಂದೆ, ತಾಯಿಯನ್ನು ಕಳೆದುಕೊಂಡ ಮಕ್ಕಳ ಮಾಹಿತಿ) ನಿಮ್ಮ ಗಮನಕ್ಕೆ ಬಂದರೆ ನಮಗೆ ತಿಳಿಸಬೇಕೆಂದು ಮನವಿ ಮಾಡಿದರು.
ಲೇಜಿನ ಉಪನ್ಯಾಸಕರಾದ ಸಂತೋಷ್ ರೆಡ್ಡಿ ಸ್ವಾಗತಿಸಿದರು. ಡಾನ್ ಬೋಸ್ಕೋ ಚಿಕ್ಕಪೇಟ ಬೀದರ್ ಸ್ವಯಂ ಸೇವಾ ಸಂಸ್ಥೆಯ ನಿರ್ದೇಶಕರಾದ ಫಾದರ್ ಸ್ಟೀವನ್ ಲಾರೆನ್ಸ್ ಅವರ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಯರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


