ತುಮಕೂರು: ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನ ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿರುವ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ನಡೆದಿದೆ.
ಹಲವಾರು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಚಿರತೆಯನ್ನ ಸಾರ್ವಜನಿಕರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ತಿಪಟೂರು ತಾಲ್ಲೋಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬುವವರ ತೋಟದಲ್ಲಿ ಬೀಡುಬಿಟ್ಟಿದ ಸುಮಾರು 4ರಿಂದ 5 ವರ್ಷ ಪ್ರಾಯದ ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆ ಬಲೆಬೀಸಿತ್ತು. ಆದರೆ ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನ ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿದ್ದಾರೆ.
ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಚಿರತೆ ಹಿಡಿದ್ದು, ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ತುಮಕೂರು ಉಪ ಅರಣ್ಯಸಂರಕ್ಷಣಾಧಿಕಾರಿ ಅನುಪಮ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭರತ್ ಡಿ.ವಲಯ ಅರಣ್ಯಾಧಿಕಾರಿ ಕೆ.ಎಲ್ ಮಧು,ಉಪ ಅರಣ್ಯಾಧಿಕಾರಿ ಪ್ರದೀಪ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx