ತುಮಕೂರು: ನಗರದ ಕನ್ನಡ ಭವನದಲ್ಲಿ 76ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ನೆರವೇರಿಸಿ, “ನಮ್ಮ ಸಂವಿಧಾನ- – ನಮ್ಮ ಶಕ್ತಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾಗಿ ಅನುಷ್ಠಾನಗೊಂಡಿರುವ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನ” ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ತಿಳಿಸಿದರು.
ಸಂವಿಧಾನದ ಆಶಯ ಸಮಾನತೆ–ಐಕ್ಯತೆ–ಭ್ರಾತೃತ್ವ ಬಲಿಷ್ಠ ಭಾರತದ ಪ್ರಗತಿಯೇ ಆಗಿದೆ. ದೇಶ 75 ವರ್ಷಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದರೂ ಸಾಧಿಸಬೇಕಾದದ್ದು ಇನ್ನೂ ಇದೆ. ವಿಜ್ಞಾನ ತಂತ್ರಜ್ಞಾನ, ಆರ್ಥಿಕತೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಸಾಧಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಸ್ಥಾನವನ್ನು ಪಡೆಯುತ್ತಿದೆ. ಭಾರತೀಯರಾದ ನಾವು ಸಮಾನತೆ–ಸರಳತೆ–ಐಕ್ಯತೆಗಾಗಿ ಶ್ರಮಿಸೋಣ ಎಂದು ತಿಳಿಸಿದರು.
ಚಿತ್ರದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಜಿಲ್ಲಾ ಸಂಚಾಲಕ ಜಿ.ಹೆಚ್.ಮಹದೇವಪ್ಪ, ತಾಲ್ಲೂಕು ಕಸಾಪ ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ಪದಾಧಿಕಾರಿಗಳಾದ ಚಾಂದು ಮುಂತಾದವರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4