ನಮ್ಮ ಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಶಸ್ತಿಗಳ ಆಯ್ಕೆ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿ ಬಿಡುತ್ತೇನೆ. ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ ಎಂದರು.
ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರ ರವೀಂದ್ರ ಕಲಾಕ್ಷೇತ್ರಕ್ಕೆ ಆಧುನಿಕ ಸ್ಪರ್ಶ ಒದಗಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕ್ರಮಕ್ಕೆ ಸಾಂಸ್ಕೃತಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ವಜ್ರ ಮಹೋತ್ಸವದ ಸಂಭ್ರಮದಲ್ಲಿರುವ ರವೀಂದ್ರ ಕಲಾಕ್ಷೇತ್ರಕ್ಕೆ ಕೇಂದ್ರೀಕೃತ ಹವಾನಿಯಂತ್ರಣ ವ್ಯವಸ್ಥೆ ಸೇರಿ ವಿವಿಧ ಅತ್ಯಾಧುನಿಕ ಸೌಲಭ್ಯಗಳ ಅಳವಡಿಕೆಗೆ ಇಲಾಖೆ ಮುಂದಾಗಿದ್ದು, ಈ ನವೀಕರಣಕ್ಕೆ ₹24 ಕೋಟಿ ವೆಚ್ಚವಾಗಲಿದೆಯೆಂದು ಲೋಕೋಪಯೋಗಿ ಇಲಾಖೆ ಅಂದಾಜಿಸಿದೆ.


