ನವದೆಹಲಿ: ನಮ್ಮ ಸರ್ಕಾರವು ಕ್ರೀಡೆಗೆ ಮತ್ತಷ್ಟು ಬೆಂಬಲ ನೀಡಲು ಬದ್ಧವಾಗಿದೆ. ಮತ್ತಷ್ಟು ಯುವ ಪ್ರತಿಭೆಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಪ್ರಜ್ವಲಿಸುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ ಬಳಿಕ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್ ಚಂದ್ ಜಿ ಅವರಿಗೆ ಗೌರವ ಸಲ್ಲಿಸುತ್ತೇವೆ. ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವ ಮತ್ತು ಭಾರತಕ್ಕಾಗಿ ಆಡಿದ ಎಲ್ಲರನ್ನು ಅಭಿನಂದಿಸಲು ಇದು ಒಂದು ಸುಸಂದರ್ಭವಾಗಿದೆ ಎಂದು ಪ್ರಧಾನಿ ಹೇಳಿದರು.
ನಮ್ಮ ಸರ್ಕಾರವು ಕ್ರೀಡೆಯನ್ನು ಬೆಂಬಲಿಸಲು ಬದ್ಧವಾಗಿದೆ ಮತ್ತು ಹೆಚ್ಚಿನ ಸಂಖ್ಯೆಯ ಯುವಕರು ಯುವಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಸಮರ್ಥರಾಗಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q