ಮೆಟ್ರೋ ರೈಲು ನಿಗಮವು (BMRCL) ಅತ್ಯಧಿಕ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ ಬರೆದಿದೆ. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಾಲು ಸಾಲು ರಜಾದಿನಗಳು ಇರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಒಂದೇ ದಿನದಲ್ಲಿ 9.17ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 2011ರಿಂದ ನಮ್ಮ ಮೆಟ್ರೋ ಸಂಚಾರ ಆರಂಭವಾದಾಗಿನಿಂದ ಈವರೆಗೆ ಪ್ರತಿನಿತ್ಯ ಸರಾಸರಿ 6.36 ಲಕ್ಷ ಜನರು ಸಂಚಾರ ಮಾಡುತ್ತಾರೆ. ಕಳೆದ 2024ರ ಆಗಸ್ಟ್6, 2024 ರಂದು ನಮ್ಮ ಮೆಟ್ರೋ ರೈಲಿನಲ್ಲಿ 8.26 ಲಕ್ಷ ಪ್ರಯಾಣಿಕರು ಸಂಚಾರ ಮಾಡಿ ಈವರೆಗಿನ ಅತ್ಯಧಿಕ ದಾಖಲೆ ನಿರ್ಮಿಸಲಾಗಿತ್ತು. ಆದರೆ, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಆ.14ರಂದು ಊರಿನತ್ತ ಹೋಗುವವರ ಸಂಖ್ಯೆ ಹೆಚ್ಚಾಗಿದ್ದರಿಂದ ನಮ್ಮ ಮೆಟ್ರೋದಲ್ಲಿ ಸಂಚಾರ ಮಾಡಿದ ಪ್ರಯಾಣಿಕ ಸಂಖ್ಯೆಯೂ ಹೆಚ್ಚಾಗಿದೆ. ಜೊತೆಗೆ, ಲಾಲ್‌ಬಾಗ್‌ನಲ್ಲಿ ಆಯೋಜನೆ ಮಾಡಲಾಗಿರುವ ಫ್ಲವರ್ ಶೋ ಕಾರ್ಯಕ್ರಮ ವೀಕ್ಷಣೆಗೆ ಹೋಗುವವರ ಸಂಖ್ಯೆಯೂ ಅಧಿಕತವಾಗಿದೆ. ಈ ಹಿನ್ನೆಲೆಯಲ್ಲಿ ಆ.14ರಂದು ಬರೋಬ್ಬರಿ 9.17 ಲಕ್ಷ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬಿಎಂಆರ್‌ಸಿಎಲ್ ಸಿಬ್ಬಂದಿ ತಿಳಿಸಿದ್ದಾರೆ.
ಇದು ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ. ಎಲ್ಲಾ ಪ್ರಯಾಣಿಕರಿಗೆ ನಮ್ಮ ಮೆಟ್ರೋದ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸೇವೆ ನೀಡುತ್ತೇವೆ. ಸದಾ ನಿಮ್ಮ ಸೇವೆಯಲ್ಲಿ ನಮ್ಮ ಮೆಟ್ರೋ ಇರುತ್ತದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಹಾಕುವ ಮೂಲಕ BMRCL ಹೇಳಿದೆ.
ಆಗಸ್ಟ್ 6ರಂದು ನಮ್ಮ ಮೆಟ್ರೋದಲ್ಲಿ ಒಂದೇ ದಿನ ಬರೋಬ್ಬರಿ 8.26ಲಕ್ಷ ಮಂದಿ ಸಂಚರಿಸಿದ್ದರು. ಇದೇ ಈವರೆಗಿನ ದಾಖಲೆಯಾಗಿತ್ತು. ಇದೀಗ ಒಂದೇ ವಾರದಲ್ಲಿ ಆ ದಾಖಲೆಯನ್ನು ಮುರಿಯಲಾಗಿದೆ. ಇದು ಮೆಟ್ರೋ ಆರಂಭವಾದ ಕಳೆದ 12ವರ್ಷಗಳ ಸಾರ್ವಕಾಲಿಕ ದಾಖಲೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296