ಬೆಂಗಳೂರು: ಮೆಟ್ರೋ ದರ ಇಳಿಸಬೇಕು ಎಂದು ಸರ್ಕಾರ ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿ ತೆಗೆದುಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೂ ಅದಕ್ಕೂ(ಮೆಟ್ರೋ ಬೆಲೆ ಏರಿಕೆಗೂ) ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು ಎಂದು ಡಿಕೆಶಿ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4