ಬೆಂಗಳೂರು: ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ನಮ್ಮ 138 ಶಾಸಕರು ಒಂದಾಗಿದ್ದಾರೆ, ನಮ್ಮ ಮನೆಯನ್ನು ಭದ್ರವಾಗಿಟ್ಟುಕೊಳ್ಳುವುದು ಹೇಗೆ ಅಂತ ಗೊತ್ತು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಜ್ಯಸಭಾ ಚುನಾವಣೆಗೆ ನಮ್ಮ ಪಕ್ಷ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿರೋಧ ಪಕ್ಷದವರು ಏನೆಲ್ಲ ಕಸರತ್ತು ನಡೆಸಿದ್ದಾರೆನ್ನುವುದರ ಮೇಲೂ ನಿಗಾ ಇಡಲಾಗಿದೆ. ಜನರ್ದನ ರೆಡ್ಡಿ ಬೆಂಬಲ ನಮಗಿದೆ ಎಂದು ಹೇಳಿದರು.
ಬಿಜೆಪಿಯವರು ಏನೇನು ಚರ್ಚೆ ಮಾಡಿದ್ದಾರೆ, ಯಾವ್ಯಾವ ಶಾಸಕರಿಗೆ ಕರೆಮಾಡಿದ್ದಾರೆ ಎನ್ನುವುದರ ಕುರಿತು ನಮಗೆ ಅರಿವಿದೆ. ಅವರ ಬತ್ತಳಿಕೆಯಲ್ಲಿ ಏನಿದೆ ಎನ್ನುವುದು ನಮಗೆ ಗೊತ್ತು. ಅದೇ ರೀತಿ ನಮ್ಮ ಬತ್ತಳಕೆಯಲ್ಲಿ ಏನಿದೆ ಎನ್ನುವುದು ಅವರಿಗೆ ತಿಳಿದಿದೆ ಎಂದರು.
ನಾವು ನಮ್ಮ ಶಾಸಕರಿಗೆ ಶಾಸಕಾಂಗ ಸಭೆಯನ್ನು ಕರೆದಿದ್ದೇವೆ ಅಲ್ಲಿ ಮಾಕ್ ವೋಟಿಂಗ್ ಇರುತ್ತದೆ. ಬೇರೆಯವರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ನಾವು ನಮ್ಮ ಮನೆಯನ್ನು ಹೇಗೆ ಭದ್ರಪಡಿಸಿಕೊಳ್ಳಬೇಕೆನ್ನುವುದು ನಮಗೆ ತಿಳಿದಿದೆ ಎಂದು ತಿರುಗೇಟು ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296