ರಾಜ್ಯದಲ್ಲಿ ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಕಚೇರಿಯಲ್ಲಿ ಷಡ್ಯಂತ್ರ ನಡೀತಿದೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮವರೇ ನನ್ನ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆ. ನಮ್ಮ ಪಕ್ಷದ ಕೆಲ ಮುಖಂಡರಿಗೆ ನನ್ನನ್ನು ಸಹಿಸಿಕೊಳ್ಳಲು ಆಗ್ತಿಲ್ಲ ಅಂತಾ ಮಾಜಿ ಸಚಿವ ರೇಣುಕಾಚಾರ್ಯ ದೂರಿದ್ದಾರೆ.
‘ನಮ್ಮ ಪಕ್ಷದವರಿಗೆ ಇನ್ನೂ ಬುದ್ಧಿ ಬಂದಿಲ್ಲ. ರಿಮೋಟ್ ಕಂಟ್ರೋಲ್ ಮೂಲಕ ರಾಜ್ಯ ಘಟಕವನ್ನು ನಿಯಂತ್ರಿಸಲಾಗುತ್ತಿದೆ’ ಎಂದು ಬಿಜೆಪಿ ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಟೀಕಿಸಿದರು.
ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರನ್ನು ಭೇಟಿ ಮಾಡಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನನಗೆ ನೋಟಿಸ್ ನೀಡಿರುವ ಕಾರಣ ಬಿಜೆಪಿ ಸಭೆಗೆ ಹೋಗಿಲ್ಲ. ನೋಟಿಸ್ ವಾಪಸ್ ಪಡೆದರೆ ಹೋಗಲು ಸಾಧ್ಯ ಎಂದಿದ್ದಾರೆ.


