ತುಮಕೂರು: ಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಬೆಟ್ಟ ತಾಂಡ ಗ್ರಾಮದಲ್ಲಿ ಲಂಬಾಣಿ ಸಮುದಾಯದ 80 ಕ್ಕೂ ಹೆಚ್ಚು ಮನೆಗಳ ಬಳಿಯಲ್ಲಿ ಕಲುಷಿತ ವಾತಾವರಣ ಸೃಷ್ಟಿಯಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ನಮ್ಮತುಮಕೂರು ವರದಿ ಮಾಡಿತ್ತು. ವರದಿ ಪ್ರಕಟಗೊಂಡು ಕೆಲವೇ ಗಂಟೆಗಳಲ್ಲಿ ಸ್ಥಳೀಯಾಡಳಿತ ಕ್ರಮಕೈಗೊಂಡಿದೆ.
ಚರಂಡಿಯಲ್ಲಿ ಹೂಳು ತುಂಬಿದ ಪರಿಣಾಮ ನೀರು ಚರಂಡಿಯಲ್ಲಿ ನಿಂತಿತ್ತು. ಫಾರ್ತೇನಿಯಂ ಗಿಡಗಳು ಬೆಳೆದು ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಭೀತಿ ಸೃಷ್ಟಿಯಾಗಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿ ಪ್ರಕಟಿಸಿದ ಬೆನ್ನಲ್ಲೇ ಅಧಿಕಾರಿಗಳು ತಕ್ಷಣವೇ ಕ್ರಮಕೈಗೊಂಡಿದ್ದಾರೆ.
ಇದೀಗ ಫಾರ್ತೇನಿಯಂ ಗಿಡಗಳನ್ನು ತೆರವುಗೊಳಿಸಿ, ಚರಂಡಿಯನ್ನು ಸ್ವಚ್ಛಗೊಳಿಸುವ ಕೆಲಸ ಅಧಿಕಾರಿಗಳು ನಡೆಸುತ್ತಿದ್ದಾರೆ. ಊರಿನ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ನಮ್ಮತುಮಕೂರು ಮಾಧ್ಯಮಕ್ಕೆ ಸ್ಥಳೀಯರು ಧನ್ಯವಾದ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q