nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ

    July 2, 2026

    ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

    July 2, 2026
    Facebook Twitter Instagram
    ಟ್ರೆಂಡಿಂಗ್
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ ಸುದ್ದಿ December 3, 2024

    ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    By adminDecember 3, 2024No Comments2 Mins Read
    lakshmi hebbalkar

    ಬೆಂಗಳೂರು: ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ ವಿಕಲಚೇತನರ ಪಾಲಿಗಂತೂ ಹೃದಯವಂತ ಸರ್ಕಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

    ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ- 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

    ಇಂದು ಸರ್ಕಾರ ಬಹಳಷ್ಟು ಕಾರ್ಯಕ್ರಮಗಳನ್ನು ನಮ್ಮ ಇಲಾಖೆ ವತಿಯಿಂದ ವಿಕಲಚೇತನರಿಗೆ ಕೊಟ್ಟಿದೆ. ನಮ್ಮ ಉದ್ದೇಶ; ಗುರಿ ಇಷ್ಟೇ, ವಿಶೇಷಚೇತನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು. ದೇಶದಲ್ಲಿ ಎಲ್ಲರಿಗೂ ಸಂವಿಧಾನಬದ್ಧವಾದ ಹಕ್ಕುಗಳಿವೆ. ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಅದರಲ್ಲೂ ವಿಶೇಷವಾಗಿ ವಿಶೇಷಚೇತನರಿಗೂ ಅನ್ವಯಿಸುತ್ತವೆ. ಸರ್ಕಾರ ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ಕಲ್ಪಿಸಲು ಮುಂದಾಗಿದೆ ಎಂದರು.

    ಸಂವಿಧಾನಬದ್ಧವಾದ ಹಕ್ಕನ್ನು ಎಲ್ಲರಿಗೂ ಸಮಾನವಾದ ಅಧಿಕಾರಗಳು, ಸಮಾನವಾದ ಅವಕಾಶಗಳನ್ನು, ಅದರಲ್ಲೂ ವಿಶೇಷವಾಗಿ ವಿಕಲಚೇತನರಿಗೂ ನೀಡುವುದೇ ನಮ್ಮ ಸರ್ಕಾರದ ಉದ್ದೇಶ. ಇಲಾಖೆಯ ಅನೇಕ ಕಾರ್ಯಕ್ರಮಗಳನ್ನು ವಿಕಲಚೇತನರಿಗೆ ನೀಡಲಾಗಿದೆ. ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ಕೈಪಿಡಿಯನ್ನು ಬಿಡುಗಡೆಗೊಳಿಲಾಗಿದೆ.

    ಮುಖ್ಯಮಂತ್ರಿಗಳು ಹಾಗೂ ನಮ್ಮ ಸರ್ಕಾರಕ್ಕೆ ಒಳ್ಳೆಯ ಹೃದಯವಿದೆ; ವಿಕಲಚೇತನರ ಬಗ್ಗೆ ಅತ್ಯಂತ ಗೌರವವಿದೆ. ವಿಕಲಚೇತರಿಗೆ ಏನೆಲ್ಲ ಅನುಕೂಲಗಳನ್ನು ಮಾಡಬೇಕೆನ್ನುವುದನ್ನು ಮನಗಂಡಿದೆ ಎಂದು ಹೇಳಿದರು.

    ವಿಕಲಚೇತನರ ಬಗ್ಗೆ ವಿಶೇಷ ಕಾಳಜಿ, ಆಸಕ್ತಿ ಸರ್ಕಾರಕ್ಕಿದೆ; ಹಾಗೆಯೇ, ವಿಕಲಚೇತನರನ್ನು ನೋಡಿಕೊಳ್ಳುವ ತಾಯಿಂದಿರರು, ಪೋಷಕರಾದ ಆರೈಕೆದಾರರಿಗೆ ಸರ್ಕಾರ ತಿಂಗಳಿಗೆ ಒಂದು ಸಾವಿರ ರೂಪಾಯಿ ಮಾಸಾಶನ ನೀಡುತ್ತಿದೆ. ಇದು ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ನಮ್ಮ ಸರ್ಕಾರ ಆರೈಕೆದಾರರಿಗೆ ಮಾಸಾಶನ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

    ವಿಕಲಚೇತನರು ಸಮಾಜಕ್ಕೆ ಆದರ್ಶಪ್ರಾಯರು; ಏಕೆಂದರೆ ಆ ಭಗವಂತ ಬಹಳಷ್ಟು ಒಳ್ಳೆಯ ಆರೋಗ್ಯವನ್ನು, ಒಳ್ಳೆಯ ಜೀವನವನ್ನು ನೀಡಿದ್ದರೂ ಕೆಲವೊಂದು ಸಂದಿಗ್ಧ ಸಂದರ್ಭದಲ್ಲಿ ತಲೆಯ ಮೇಲೆ ಕೈ ಇಟ್ಟುಕೊಳ್ಳುತ್ತಾರೆ. ನಮಗೆಲ್ಲ, ನಮ್ಮಂತಹ ಎಲ್ಲರಿಗೂ ವಿಕಲಚೇತನರು ಆದರ್ಶರಾಗಿದ್ದಾರೆ, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ; ಎಲ್ಲರನ್ನೂ ಮೀರಿ ಸಾಧನೆ ಮಾಡಿದ್ಧಾರೆ. ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಾಲಭವನ ಅಧ್ಯಕ್ಷ ಬಿ.ಆರ್.ನಾಯ್ಡು, ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಸಿದ್ದೇಶ್ವರ್, ವಿಶೇಷ ಆಹ್ವಾನಿತರಾದ ಇಂದುಮತಿ ರಾವ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    ಕೊರಟಗೆರೆ: ತಾಲ್ಲೂಕಿನ 2026–27 ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯನ್ನು ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿ…

    ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ

    July 2, 2026

    ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

    July 2, 2026

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.