nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ November 26, 2024

    ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ: ಸಿಎಂ ಸಿದ್ದರಾಮಯ್ಯ

    By adminNovember 26, 2024No Comments2 Mins Read
    siddaramaiha samvidhana

    ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ದಿನಾಚರಣೆ, ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರವನ್ನು ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದರು. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಹೇಳಿದ್ದರು‌. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

    ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಆದ್ದರಿಂದ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಳ್ಳಬೇಕಿದೆ. ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದು, ಪಾಲಿಸುವುದು ಎಂದರೆ ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವವನ್ನು ಪಾಲಿಸುವುದೇ ಆಗಿದೆ.

    ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್‌ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು ಎಂದರು.

    ಬಾಬಾ ಸಾಹೇಬರ ಸಂವಿಧಾನ ಜಾರಿಗೂ ಮೊದಲು ಮನುಷ್ಯ–ಮನುಷ್ಯರನ್ನು ತಾರತಮ್ಯದಿಂದ ಶೋಷಿಸುವ, ಅಸಮಾನತೆಯನ್ನು ಆಚರಿಸುವ ಅನಾಗರಿಕ ವ್ಯವಸ್ಥೆ ಮತ್ತು ಶೂದ್ರರು-ದಲಿತರು-ಮಹಿಳೆಯರಿಗೆ ಶಿಕ್ಷಣವನ್ನು ವಿರೋಧಿಸುವ ಅಲಿಖಿತವಾದ ಮನುಸ್ಮೃತಿಯ ಪದ್ಧತಿಗಳು ಭಾರತದಲ್ಲಿ ಜಾರಿಯಲ್ಲಿತ್ತು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

    ಈ ಚರಿತ್ರೆಯನ್ನು, ಇತಿಹಾಸವನ್ನು ನಾವು ಮರೆಯಬಾರದು. ನಮಗೆ ಬಂದಿರುವ ಸ್ವಾತಂತ್ರ್ಯ ಸಫಲ ಆಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದರು ಎಂದು ಸಿದ್ದರಾಮಯ್ಯ ನೆನಪಿಸಿದರು.

    ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿದ ಬಳಿಕ ಅಂಬೇಡ್ಕರ್ ಅವರು ನಮ್ಮ ಅತ್ಯುನ್ನತವಾದ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸರ್ಕಾರ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕು. ನಮ್ಮ ಸರ್ಕಾರ ಕೂಡ ಸಂವಿಧಾನದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹತ್ತು ಹಲವು ಭಾಗ್ಯಗಳನ್ನು ಜಾರಿ ಮಾಡಿದೆವು‌. ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ ಎಂದರು.

    ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಕರೆ ನೀಡಿದ್ದರು. ಆದರೆ ಇವತ್ತಿಗೂ ಜಾತಿ ಹೋಗಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಬರದೆ ಜಾತಿ ವ್ಯವಸ್ಥೆ ಹೋಗಲು ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಆದ್ದರಿಂದ ಜಾತ್ಯಾತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ ಎಂದು ಸಿಎಂ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Comments are closed.

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಕೊರಟಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವುದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ವಿನ ಕ್ರೀಡಾಪಟುಗಳು ರೂಪುಗೊಳ್ಳಲು ಸಾಧ್ಯ. ಗ್ರಾಮೀಣ ಕ್ರೀಡೆಗಳು ಜೀವಂತವಾಗಿದ್ದಾಗ…

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.