ಬೆಂಗಳೂರು: ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಕಮಲ್ ಹಾಸನ್ ಕ್ಷಮೆ ಕೇಳಲ್ಲ ಎಂದು ಹೇಳಿದ ಬೆನ್ನಲ್ಲೇ ಅವರ ಭಾವಚಿತ್ರದ ಬ್ಯಾನರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ನಗರದ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪವಿತ್ರ ಪ್ಯಾರಡೈಸ್ ಸಿಗ್ನಲ್ ಬಳಿ ಈ ಘಟನೆ ನಡೆದಿದೆ. ರಾತ್ರೋ ರಾತ್ರಿ ಕನ್ನಡ ಅಭಿಮಾನಿಯೊಬ್ಬ ಕಮಲ್ ಹಾಸನ್ ಹೇಳಿಕೆಗೆ ಧಿಕ್ಕಾರ ಕೂಗಿ ಕಮಲ್ ಹಾಸನ್ ಅವರ ಭಾವಚಿತ್ರದ ಬ್ಯಾನರ್‌ಗೆ ಬೆಂಕಿ ಹಚ್ಚಿದ್ದಾರೆ.
ಫೋಟೋಗೆ ಬೆಂಕಿ ಹಚ್ಚಿದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ನೀರು ಹಾಕಿ ಬ್ಯಾನರ್ ನ್ನು ರಸ್ತೆಯಿಂದ ತೆಗೆದು ಹಾಕಿದ್ದಾರೆ.
`ಥಗ್ ಲೈಫ್’ ಸಿನಿಮಾದ ಪ್ರಚಾರದ ವೇಳೆ ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW