ಬೆಂಗಳೂರು: ತಾಯಿ ಚಾಮುಂಡೇಶ್ವರಿ ವಿಚಾರ ಸಂಬಂಧ ಹೇಳಿದ್ದ ಡೈಲಾಗ್ ಗೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಶೋನಲ್ಲಿ ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ಸಹನಟಿಗೆ “ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು, ಪ್ಯಾಂಟು ಶರ್ಟು ಹಾಕೊಂಡು ಸ್ವಿಜರ್ಲ್ಯಾಂಡ್ನಲ್ಲಿ ಟ್ರಿಪ್ ಹೊಡಿತಿದ್ದಾರೆ ಅನ್ನಿಸ್ತಿದೆ” ಎಂದು ಡೈಲಾಗ್ ಹೇಳಿದ್ದು, ಇದು ಹಿಂದೂ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹೇಳಿಕೆ ವಿರುದ್ಧ ಕೆರಳಿರೋ ಹಿಂದೂ ಮುಖಂಡರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಕೂಡಲೇ ರಕ್ಷಕ್ ಬಹಿರಂಗ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದು, ಕಾರ್ಯಕ್ರಮ ಆಯೋಜಕರು, ತೀರ್ಪುಗಾರರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4