ಬೆಂಗಳೂರು: ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣ ಬಾರದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಹಣ ಹಾಕುವುದು ಸ್ವಲ್ಪ ತಡವಾಗಿದೆ. ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ವರ್ಗಾಹಿಸಿಲ್ಲ. ಆದರೆ ಸರ್ಕಾರ ಮಾತು ಕೊಟ್ಟಂತೆ ಎರಡು ಯೋಜನೆಗಳ ಹಣವನ್ನು ಖಾತೆಗಳಿಗೆ ಹಾಕುತ್ತೇವೆ ಎಂದರು.
ಇನ್ನುಂದೆ ತಿಂಗಳಿಗೆ ಸರಿಯಾಗಿ ಗ್ಯಾರೆಂಟಿ ಯೋಜನೆಗಳ ಹಣ ವರ್ಗಾವಣೆಯಾಗಲಿದೆ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4