ಹಾಸನ: ಜಿಲ್ಲೆಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿಯ ತಾತನಹಳ್ಳಿ ಗ್ರಾಮದ ಸುಮಾರು 40 ಮಂದಿ ಮೂಲ ಜೆಡಿಎಸ್ ಕಾರ್ಯಕರ್ತರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಸ್ಥಳೀಯ ಮುಖಂಡರಾದ ಧರ್ಮ, ಶಿವಣ್ಣ ಹಾಗೂ ಪಟೇಲ್ ಬೋರೇಗೌಡ ಅವರ ನೇತೃತ್ವದಲ್ಲಿ ಈ ಕಾರ್ಯಕರ್ತರು ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ಪಕ್ಷವನ್ನು ಸೇರಿದರು.
ಹಲವು ವರ್ಷಗಳಿಂದ ಜೆಡಿಎಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಿಷ್ಠಾವಂತ ಕಾರ್ಯಕರ್ತರು ಇದೀಗ ಕೈ ಹಿಡಿಯುವ ಮೂಲಕ ತಮ್ಮ ರಾಜಕೀಯ ಪಯಣದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಈ ಸಾಮೂಹಿಕ ಸೇರ್ಪಡೆಯು ಕೇವಲ ಸಂಖ್ಯಾಬಲದ ದೃಷ್ಟಿಯಿಂದ ಮಾತ್ರವಲ್ಲದೆ, ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಯ ಬಲವರ್ಧನೆ, ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ದೃಷ್ಟಿಯಿಂದಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
