ಚಿತ್ರದುರ್ಗ: ಕೆಎಸ್ ಆರ್ ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಬಸ್ಸಿನಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು ಓಬಳಾಪುರ ತಾಂಡ ವಾಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕೂಡಲೇ ಸ್ಥಳೀಯರು ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಹಾಗೂ ಇತರ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296