ಕಠ್ಮಂಡು: ಟಿಬೆಟ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು 62 ಮಂದಿ ಗಾಯಗೊಂಡಿದ್ದಾರೆ.
ಭೂಕಂಪವು ನೆರೆಯ ನೇಪಾಳದ ರಾಜಧಾನಿ ಕಠ್ಮಂಡು ಮತ್ತು ಭಾರತದ ಉತ್ತರ ಭಾಗಗಳಲ್ಲಿ ಭೂಕಂಪನದೊಂದಿಗೆ ಟಿಬೆಟ್ ನಲ್ಲಿ ಅನೇಕ ಕಟ್ಟಡಗಳ ಕುಸಿತಕ್ಕೆ ಕಾರಣವಾಯಿತು.
ಚೀನಾ ಭೂಕಂಪ ನೆಟ್ವರ್ಕ್ ಸೆಂಟರ್ (ಸಿಇಎನ್ಸಿ) ಪ್ರಕಾರ, ನೇಪಾಳದ ಗಡಿಯ ಸಮೀಪ 7.1 ರ ತೀವ್ರತೆಯೊಂದಿಗೆ ಡಿಂಗ್ರಿ ಕೌಂಟಿಯಲ್ಲಿ ಬೆಳಿಗ್ಗೆ 6:35 ಕ್ಕೆ ಭೂಕಂಪ ಸಂಭವಿಸಿದೆ.
ಬಿಹಾರದಲ್ಲಿಯೂ ಭೂಮಿ ಕಂಪಿಸಿದ ಅನುಭವ ಜನತೆಗೆ ಆಗಿದೆ. ಜನರು ತಮ್ಮ ಮನೆಗಳು ಮತ್ತು ಅಪಾರ್ಟ್ಮೆಂಟ್ಗಳ ಹೊರಗೆ ಓಡುತ್ತಿರುವ ದೃಶ್ಯ ಕಂಡುಬಂತು. ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx