ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿರೋದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
545 ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ ನೇಮಕಾತಿಯನ್ನೇ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸೋದಾಗಿಯೂ ಹೇಳಿತ್ತು.
ಈ ಕುರಿತಂತೆ ಟ್ವಿಟ್ ಮಾಡಿರುವ ಪ್ರವೀಣ್ ಸೂದ್, ಆರ್ ಎಸ್‌ಐ ( ಸಿಎಆರ್ ಮತ್ತು ಡಿಎಆರ್ ), ವಿಶೇಷ ಆರ್ ಎಸ್‌ಐ ( ಕೆ ಎಸ್ ಆರ್ ಪಿ ) ಹಾಗೂ ಪಿಎಸ್‌ಎ ( ರಾಜ್ಯ ಕೈಗಾರಿಕಾ ಭದ್ರತಾ ಪಡೆ)ಗಳಿಗೆ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
545 ಪಿಎಸ್‌ಐ ನೇಮಕಾತಿ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


