ಹಿರಿಯೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಿ.ಸುಧಾಕರ್ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿದರು.
ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಖಾದಿ ರಮೇಶ್ ಅವರ ನೇತೃತ್ವದಲ್ಲಿ ನೇಮಕಾತಿ ಪತ್ರವನ್ನು ನೀಡಲಾಯಿತು.
ಕಾಂಗ್ರೆಸ್ ಪಕ್ಷದ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಪಕ್ಷದ ಸ್ಥಳೀಯ ನಾಯಕರುಗಳಿಗೆ ನೀಡಿರುವಂತಹ ಜವಾಬ್ದಾರಿ ಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಇದೇ ವೇಳೆ ಅವರು ಆಶಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ ಪಿ ಸಿ ಸಿ ಕಾರ್ಮಿಕ ವಿಭಾಗದ ಸುಜಾತ , ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ, ಕಾರ್ಮಿಕ ವಿಭಾಗದ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ, ಕಲ್ಲಹಟ್ಟಿ ಹರೀಶ್ , ಗೋಪಾಲಪುರ ಗಿರೀಶ್, ಚಿದಾನಂದ ಸ್ವಾಮಿ, ಜ್ಞಾನೇಶ್, ಎಸ್.ತಿಮ್ಮಯ್ಯ, ಶಶಿಕಲಾ ಸುರೇಶ್ ಹಾಗೂ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕರ್ತರು ಹಾಗೂ ಮುಖಾಂಡರುಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು .
ವರದಿ: ಮುರುಳಿಧರನ್ ಆರ್. ಹಿರಿಯೂರು (ಚಿತ್ರದುರ್ಗ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy