ಪಡುವಲಕಾಯಿ ಜ್ಯೂಸ್ ನಿಂದ ನಮ್ಮ ದೇಹದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ತೂಕ ಇಳಿಕೆ, ಜೀರ್ಣಕ್ರಿಯೆ, ಹೃದಯ ಸಂಬಂಧಿ ಕಾಯಿಲೆ ಹೀಗೆ ಹಲವು ಬಗೆಯಲ್ಲಿ ಪಡವಲಕಾಯಿ ನಮ್ಮ ಆರೋಗ್ಯಕ್ಕೆ ವರದಾನವಾಗಿದೆ.
ಇದರಲ್ಲಿ ಕ್ಯಾಲೋರಿಗಳು ಮತ್ತು ಕೊಬ್ಬಿನಲ್ಲಿ ತುಂಬಾ ಕಡಿಮೆಯಾಗಿದೆ. ಈ ಕಾರಣದಿಂದಾಗಿ, ತೂಕವನ್ನು ನಿಯಂತ್ರಿಸಲು ಇದು ಸಹಕಾರಿಯಾಗಿದೆ. ಪಡವಲಕಾಯಿಯಲ್ಲಿ ಫೈಬರ್ ಮತ್ತು ಶೇ.98 ರಷ್ಟು ನೀರು ಸಮೃದ್ಧವಾಗಿದೆ. ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುಣಪಡಿಸಲು ಇದು ತುಂಬಾ ಸಹಾಯಕವಾಗಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯಲು ಪಡವಲಕಾಯಿ ಸಹಕಾರಿಯಾಗಿದೆ. ಖಾಲಿ ಹೊಟ್ಟೆಯಲ್ಲಿ ಪಡವಲಕಾಯಿ ರಸವನ್ನು ಸೇವಿಸುವುದರಿಂದ ದೇಹಕ್ಕೆ ಪೋಷಕಾಂಶಗಳು ದೊರೆಯುತ್ತವೆ. ಮಾತ್ರವಲ್ಲದೇ ಕೂದಲಿನ ಆರೈಕೆಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.
ಪಡವಲಕಾಯಿಯಲ್ಲಿ ವಿಟಮಿನ್ ಎ, ಬಿ, ಸಿ ಮತ್ತು ಮೆಗ್ನಿಷಿಯಂ, ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಇವೆ. ಇದರ ರಸವನ್ನು ತಲೆಗೆ ಹಚ್ಚಿ ಅರ್ಧ ಗಂಟೆಯ ನಂತರ ಸ್ನಾನ ಮಾಡಿದರೆ ತಲೆಹೊಟ್ಟು ಕಡಿಮೆಯಾಗುತ್ತದೆ.
ಪಡವಲಕಾಯಿ ದೇಹದಿಂದ ವಿಷವನ್ನು ಪರಿಣಾಮಕಾರಿಯಾಗಿ ತೆಗೆದುಹಾಕುತ್ತದೆ. ಮೂತ್ರಪಿಂಡಗಳು ಮತ್ತು ಮೂತ್ರಕೋಶಗಳು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.
ಗಂಟಲಿನಲ್ಲಿ ಕಫವನ್ನು ಕಡಿಮೆ ಮಾಡುತ್ತದೆ ಮತ್ತು ಉಸಿರಾಟದ ಕಾರ್ಯವನ್ನು ಸುಧಾರಿಸುತ್ತದೆ. ರಕ್ತ ಸಂಚಾರ ಸುಗಮವಾಗುವಂತೆ ಮಾಡುತ್ತದೆ. ಪ್ರತಿದಿನ ಎರಡು ಲೋಟ ಪಡವಲಕಾಯಿ ರಸವನ್ನು ಕುಡಿಯುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುವುದಿಲ್ಲ. ಬಿಪಿಯನ್ನು ನಿಯಂತ್ರಣದಲ್ಲಿಡುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz