ವಿವಾಹಿತೆಯನ್ನು ಮದುವೆ ಆಗು ಅಂತ ಪಾಗಲ್ ಪ್ರೇಮಿ ಪೀಡಿಸಿದ್ದು, ಮದುವೆ ಆಗೋದಿಲ್ಲ ಅಂದಿದ್ದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟಿರುವಂತಹ ಘಟನೆ ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ನಡೆದಿದೆ. ಅರ್ಬಾಜ್ ಮಹಿಳೆ ಮನೆಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿಯಾಗಿದ್ದಾರೆ.
ಮಹಿಳೆಯ ದೂರದ ಸಂಬಂಧಿಯಾಗಿದ್ದ ಅರ್ಬಾಜ್, ಮದುವೆ ಆಗು ಎಂದು ಮಹಿಳೆ ಹಿಂದೆ ಬಿದ್ದಿದ್ದ. ಈ ಬಗ್ಗೆ 2 ಕುಟುಂಬದ ಹಿರಿಯರು ಬುದ್ಧಿ ಹೇಳಿದ್ದರು. ಹಿರಿಯರ ಬುದ್ಧಿಮಾತಿಗೂ ಬಗ್ಗದ ಅರ್ಬಾಜ್, ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ಮನೆಗೆ ಬೆಂಕಿ ಹಚ್ಚಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಕ್ಕೆ ಭಾರೀ ಅನಾಹುತ ತಪ್ಪಿದೆ. ಬೆಂಕಿ ಇಟ್ಟಿದ್ದರಿಂದ ಮನೆಯಲ್ಲಿದ್ದ ಬಟ್ಟೆಗಳು, ಟಿವಿ, ಫ್ರಿಡ್ಜ್ ವಸ್ತುಗಳು ಬೆಂಕಿಗಾಹುತಿ ಆಗಿವೆ ಎನ್ನಲಾಗಿದೆ. ಕೇಸ್ ದಾಖಲಿಸಿಕೊಂಡು ಅರ್ಬಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA