ತುಮಕೂರು: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆ ಹಾಗೂ ಪರೀಕ್ಷಾ ಕೊಠಡಿಯ ಸಮೀಪ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ತುಮಕೂರು ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ನಗರದ ಟೌನ್ ಹಾಲ್ ವೃತ್ತದಿಂದ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ವರೆಗೂ ಮೆರವಣಿಗೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್, ಸಿಇಟಿ ಪರೀಕ್ಷಾ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು ಹಿಂದೂ ಸಂಪ್ರದಾಯಕ್ಕೆ ಮಾಡಿದ ಅಪಮಾನವಾಗಿದೆ. ಇದನ್ನು ಎಲ್ಲಾ ಹಿಂದೂಗಳು ತೀವ್ರವಾಗಿ ಖಂಡಿಸಬೇಕಿದೆ ಎಂದು ಕರೆ ನೀಡಿದರಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇನ್ನೊಂದೆಡೆ ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ತಕ್ಷಣ ಕೇಂದ್ರ ಸರ್ಕಾರ ಭಯೋತ್ಪಾದಕರ ಚಟುವಟಿಕೆಯನ್ನು ಮಟ್ಟ ಹಾಕಬೇಕೆಂದು ಮನವಿ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW