ತುಮಕೂರು: ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ಪ್ರಥಮ ವರ್ಷದ ಬಿವಿಎ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ವಸಂತಾ ಟಿ.ಡಿ. ಉದ್ಘಾಟಿಸಿದರು. ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ತುಮಕೂರು ಇದರ ಪ್ರಾಂಶುಪಾಲರಾದ ಸಿ.ಸಿ. ಬಾರಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ತರನ್ನುಂ ನಿಖತ್ ಎಸ್., ಸ.ಪ್ರ.ದರ್ಜೆ ಕಾಲೇಜಿನ ಗಣಿತ ಶಾಸ್ತ್ರ ಮುಖ್ಯಸ್ಥರಾದ ಯೋಗೀಶ್, ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು ಇದರ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನಟರಾಜು ಜಿ.ಎಲ್., ಹಳೆಯ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್, ಖಜಾಂಚಿ ಮಹಮ್ಮದ್ ಗೌಸ್ ಪೀರ್ ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q