ಬೆಂಗಳೂರು: ನಗರದ ನ್ಯೂ ಹೊರೈಜನ್ ಕಾಲೇಜಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ.
ಇಂಜಿನಿಯರಿಂಗ್ ಮೊದಲ ವರ್ಷದ ಆರ್ಯನ್, ದಿನಕರ್, ರಿಯಾ ಪಾಕ್ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಇತರೆ ವಿದ್ಯಾರ್ಥಿಗಳು ಮೂವರನ್ನು ಥಳಿಸಲು ಮುಂದಾಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳು ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ್ದಾರೆ.
ವಿದ್ಯಾರ್ಥಿಗಳ ವಿರುದ್ಧ ಮಾರತ್‌ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ.
ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದಾರೆ. ಇನ್ನು ಕಾಲೇಜು ಆಡಳಿತ ಮಂಡಳಿ ಮೂವರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz