ಕೋಲಾರ: ಭಾರತ-ಪಾಕಿಸ್ತಾನ ಪಂದ್ಯಾವಳಿ ಸಂದರ್ಭದಲ್ಲಿ ಪಾಕ್ ಪರವಾಗಿ ಸ್ಟೇಟಸ್ ಹಾಕಿದ್ದಂತ ಮೂವರ ವಿರುದ್ಧ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಓರ್ವನನ್ನು ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸ ಪುರ ತಾಲೂಕಿನಲ್ಲಿ ನಡೆದಿದೆ.
ಭಾರತ ಮತ್ತು ಪಾಕಿಸ್ತಾನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಬೆಂಬಲಿಸಿ ಸ್ಟೇಟಸ್ ಹಾಕಲಾಗಿತ್ತು. ಸೋಹೆಲ್, ತೋಹಿಬ್ ಪಾಷ ಹಾಗೂ ಮನ್ಸೂರ್ ಉಲ್ಲಾ ಎಂಬುವರು ಪಾಕ್ ಪರ ಸ್ಟೇಟಸ್ ಹಾಕಿದ್ದರು.
ಇದನ್ನು ಗಮನಿಸಿದಂತ ಪುರಸಭೆಯ ನಾಮನಿರ್ದೇಶಿತ ಸದಸ್ಯ ರಾಮಾಂಜಿಯವರು ಶ್ರೀನಿವಾಸಪುರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಸೊಹೇಲ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನುಳಿದ ತೊಹೀಬ್ ಹಾಗೂ ಮನ್ಸೂರ್ ಹಾಗಿ ಹುಡುಕಾಟ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy