ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧದಲ್ಲಿ ಬದಲಾವಣೆಯಾಗಲಿದೆ ಎಂದು, ಪಾಕಿಸ್ತಾನ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಸುಳಿವು ನೀಡಿದ್ದಾರೆ. ಆಗಸ್ಟ್ 2019 ರಿಂದ ಸ್ಥಗಿತಗೊಂಡಿರುವ ಭಾರತದೊಂದಿಗೆ ವ್ಯಾಪಾರ ಸಂಬಂಧಗಳನ್ನು ಮರುಸ್ಥಾಪಿಸಲು ಪರಿಗಣಿಸುವುದಾಗಿ ಪಾಕಿಸ್ತಾನ ಹೇಳಿದೆ.
ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿರುವ ಪಾಕಿಸ್ತಾನವು ಮಂದಗತಿಯ ಆರ್ಥಿಕ ಬೆಳವಣಿಗೆ ಮತ್ತು ಹೊಸ ಹೂಡಿಕೆಗಳ ಕೊರತೆಯಿಂದಾಗಿ ವಿದೇಶಿ ಸಾಲಗಳನ್ನು ಮರುಪಾವತಿಸಲು ಹೆಣಗಾಡುತ್ತಿದೆ.
ಬ್ರಸೆಲ್ಸ್ ನಲ್ಲಿ ನಡೆದ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಲಂಡನ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಶಾದ್, ಭಾರತದೊಂದಿಗೆ ವ್ಯಾಪಾರವನ್ನು ಪುನರಾರಂಭಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದರು. ಭಾರತದೊಂದಿಗೆ ವ್ಯಾಪಾರ ವ್ಯವಹಾರಗಳನ್ನು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಪಾಕಿಸ್ತಾನ್ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ಇತ್ತೀಚೆಗೆ ನಡೆದ ಪಾಕಿಸ್ತಾನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ ಶಹಬಾಜ್ ಷರೀಫ್ ಅವರನ್ನು ಅಭಿನಂದಿಸಿದರು. ಇದು ಪಾಕಿಸ್ತಾನ ಮತ್ತು ಭಾರತ ನಡುವಿನ ವ್ಯಾಪಾರ ಸಂಬಂಧಗಳಲ್ಲಿ ಸುಧಾರಣೆಯನ್ನು ಸೂಚಿಸುತ್ತದೆ. ಫೆಬ್ರವರಿ 8 ರಂದು ಪಾಕಿಸ್ತಾನದಲ್ಲಿ ಚುನಾವಣೆ ನಡೆದಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296