ನವದೆಹಲಿ: ಪಾಕಿಸ್ತಾನವು ಸಾಮರಸ್ಯದ ಸಹಬಾಳ್ವೆಯನ್ನು ಬಯಸುತ್ತಿಲ್ಲ. ಬದಲಾಗಿ ಭಾರತದ ವಿರುದ್ಧ ಪರೋಕ್ಷ ಯುದ್ಧ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಮೆರಿಕ ಮೂಲದ ಖ್ಯಾತ ಪಾಡ್ ಕ್ಯಾಸ್ಟರ್ ಲೆಕ್ಸ್ ಫ್ರಿಡ್ ಮನ್ ಜೊತೆಗಿನ ಸಂವಾದದಲ್ಲಿ ಪ್ರಧಾನಿ ಮಾತನಾಡುತ್ತಿದ್ದರು.
ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಶಾಂತಿ ಮತ್ತು ಸಾಮರಸ್ಯದಿಂದ ಸಹಬಾಳ್ವೆ ನಡೆಸಬಹುದೇ? ಎಂದು ಲೆಕ್ಸ್ ಫ್ರಿಡ್‌ಮನ್ ಅವರು ಕೇಳಿದರು. ಇದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಪಾಕಿಸ್ತಾನ ಭಯೋತ್ಪಾದಕ ಮನಸ್ಥಿತಿಯಿಂದಾಗಿ ನಡೆಯುತ್ತಿದೆ, ಭಾರತ, ಪಾಕ್ ವಿಭಜನೆ ಕಥೆ ಮತ್ತು ನಂತರದ ರಕ್ತಪಾತದ ಹೃದಯಸ್ಪರ್ಶಿ ವಿಚಾರವನ್ನು ಹಂಚಿಕೊಂಡರು.
ಕಾಲ ಕಳೆದರೂ, ರಕ್ತಪಾತ ಮತ್ತು ಭಯೋತ್ಪಾದನೆಯಿಂದ ಅಭಿವೃದ್ಧಿ ಹೊಂದುವ ಸಿದ್ಧಾಂತದಿಂದ ಉತ್ತೇಜಿಸಲ್ಪಟ್ಟ ಪಾಕಿಸ್ತಾನ, ಭಾರತದ ವಿರುದ್ಧ ಪರೋಕ್ಷ ಯುದ್ಧವನ್ನು ಮುಂದುವರೆಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4