ರಾಮನಗರ: ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರದ ಬಗ್ಗೆ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ. ನಮಗೆ ಪಂಚರತ್ನ ಯೋಜನೆಯೇ ಸ್ಟಾರ್ ಯೋಜನೆಗಳು. ನಮ್ಮ ಪಕ್ಷದ ಕಾರ್ಯಕರ್ತರೇ ಸ್ಟಾರ್ ಪ್ರಚಾರಕರು. ದೇವೇಗೌಡರ 60 ವರ್ಷದ ರಾಜಕಾರಣ, ಅಭಿವೃದ್ಧಿ ಕೊಡುಗೆಯನ್ನು ಜನ ಮರೆತಿಲ್ಲ. ಹೀಗಾಗಿ ನಾವು ಯಾವುದೇ ಸಿನಿಮಾ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


