ಕಡೂರು: ಚಿಕ್ಕಮಗಳೂರಿನ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ವಿಚಾರವಾಗಿ ವೈಎಸ್‌ವಿ ದತ್ತಾ ಜತೆ ‘ಕೈ’ ಅಭ್ಯರ್ಥಿ ಆನಂದ್ ಶುಕ್ರವಾರ ನಡೆಸಿದ ಸಭೆ ವಿಫಲವಾಗಿದೆ. ಪಕ್ಷೇತರ ಅಭ್ಯರ್ಥಿಯಾಗುವ ಬಗ್ಗೆ ಆನಂದ್ ಸಮ್ಮುಖದಲ್ಲೇ ದತ್ತಾ ಸುಳಿವು ನೀಡಿದ್ದಾರೆ.
ಇದು ಕಡೂರು ರಾಜಕೀಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ಸುಳಿವು ನೀಡಿದೆ. ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ಮನೆಗೆ ತೆರಳಿ ಅವರ ಮನವೊಲಿಸಲು ಆನಂದ್ ಮುಂದಾಗಿದ್ದರು. ಆದರೆ, ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ದತ್ತಾ ಸ್ಪಷ್ಟಪಡಿಸಿದ್ದಾರೆ.
ಬೆಂಬಲಿಗರ ತೀರ್ಮಾನವೇ ಅಂತಿಮ. ಭಾನುವಾರ ಬೆಂಬಲಿಗರ ಜೊತೆ ಸಭೆ ನಡೆಸಿ ತೀರ್ಮಾನಿಸುತ್ತೇನೆ ಎಂದು ದತ್ತಾ ಹೇಳಿದ್ದಾರೆ. ಪಕ್ಷೇತರರಾಗುವಂತೆ ದತ್ತಾಗೆ ಬೆಂಬಲಿಗರು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ಎದುರೇ ಬೆಂಬಲಿಗರು ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


