ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಶಾಸಕ ಪಿಆರ್ ಸೆಂಥಿಲ್ನಾಥನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಡಪ್ಪಾಡಿ ಕೆ ಪಳನಿಸ್ವಾಮಿ, ಪಿಆರ್ ಸೆಂಥಿಲ್ನಾಥನ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಪಳನಿಸ್ವಾಮಿ ಅವರ ಜೊತೆ ಪ್ರಯಾಣಿಸುತ್ತಿರುವುದಾಗಿ ವ್ಯಕ್ತಿಯೊಬ್ಬ ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದಾನೆ. ಈ ವೇಳೆ ವ್ಯಕ್ತಿ ಅವರ ವಿರುದ್ಧ ಘೋಷಣೆ ಕೂಗಿದ್ದಾನೆ. ಇದಕ್ಕೆ ಪ್ರತಿಯಾಗಿ ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪಳನಿಸ್ವಾಮಿ ಅವರ ಅಂಗರಕ್ಷಕರು ಫೇಸ್‌ಬುಕ್‌ನಲ್ಲಿ ಲೈವ್‌ನಲ್ಲಿ ಹಾಗೂ ಪಳನಿಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ವ್ಯಕ್ತಿಯ ಸೆಲ್ ಫೋನ್ ಕಿತ್ತುಕೊಂಡು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ವಿಮಾನ ನಿಲ್ದಾಣದಿಂದ ಫೇಸ್‌ಬುಕ್ ಲೈವ್ ಸ್ಟ್ರೀಮ್ ಅನ್ನು ಶೇರ್ ಮಾಡಿದ ಆರೋಪದ ಮೇಲೆ ಪ್ರಯಾಣಿಕನನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


