ಪಾವಗಡ: ಸಚಿವ ಕೆ .ಎನ್. ರಾಜಣ್ಣ ಸಚಿವರಾಗಿ ಮುಂದುವರೆಸಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಶಕ್ತಿ ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವವರು, ಸಹಕಾರ ಕ್ಷೇತ್ರಕ್ಕೆ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ತಮ್ಮದೇ ಆದ ಕೊಡುಗೆಯನ್ನು ನೀಡಿ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕ ಉತ್ತಮ ಸೇವೆಯನ್ನು ಸಲ್ಲಿಸಿರುವ ಕೆ. ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಪಡೆದಿರುವ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರ ರಾಜಣ್ಣ ಅವರನ್ನು ಸಚಿವರಾಗಿ ಮುಂದುವರಿಸದಿದ್ದಲ್ಲಿ ರಾಜ್ಯದಾದ್ಯಂತ ವಾಲ್ಮೀಕಿ ಸಮಾಜ ಹಾಗೂ ಶೋಷಿತ ಸಮುದಾಯಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಹಾಗೂ ಇಂತಹ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗುವುದು ಎಂದು ತಿಳಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC