nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    • ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಿರಾಸೆ ಮೂಡಿಸಿದೆ:  ಡಾ‌.ಜಿ.ಪರಮೇಶ್ವರ್
    ತುಮಕೂರು March 13, 2022

    ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಿರಾಸೆ ಮೂಡಿಸಿದೆ:  ಡಾ‌.ಜಿ.ಪರಮೇಶ್ವರ್

    By adminMarch 13, 2022No Comments2 Mins Read
    parameshwar

    ತುಮಕೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು ತಮಗೆ ನಿರಾಸೆ ಮೂಡಿಸಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಹೇಳಿದರು.

    ನಗರದ ಹೆಗ್ಗೆರೆಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮತ್ತು ಪಕ್ಷ ಪ್ರಸ್ತುತ ನಡೆದ ಚುನಾವಣೆಯಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಿದ್ದು ಅಂತಿಮವಾಗಿ ಪಕ್ಷಕ್ಕೆ ಹಿನ್ನೆಡೆಯಾಗಿದ್ದು ಅದಕ್ಕೆ ಕಾರಣಗಳನ್ನು ಹುಡುಕಬೇಕಿದೆ ಎಂದರು.

    ಉತ್ತರ ಪ್ರದೇಶದಲ್ಲಿ ಬಿಜೆಪಿ ಗಿಂತಲೂ ಪ್ರಿಯಾಂಕ ಗಾಂಧಿಯವರು ಹೆಚ್ಚಿನ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದರು, ಜನರನ್ನು ತಲುಪುವ ಪ್ರಯತ್ನ ಮಾಡಿದರು ಆದರೂ ಮತಗಳು ಬೇರೆಯವರ ಪಾಲಾಗಿವೆ. ದೇಶದಲ್ಲಿ ಸಾಮಾನ್ಯ ಜನರ ಬದುಕಿಗೆ ತೊಂದರೆಯಾಗುತ್ತಿದೆ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿದೆ ಎನ್ನುವ ವಾತಾವರಣವಿದ್ದರೂ ಜನ ಬಿಜೆಪಿಗೆ ಮತ ಹಾಕುತ್ತಾರೆ ಎಂದರೆ ಏನೋ ಕಾರಣ ಇರಬಹುದು ಎನ್ನುವ ಅನುಮಾನ ವ್ಯಕ್ತಪಡಿಸಿದರು.

    ದೇಶದ ಅಭಿವೃದ್ಧಿ ದೃಷ್ಠಿಯಿಂದ 2024ರ ಲೋಕಸಭಾ ಚುನಾವಣೆ ಅತ್ಯಂತ ಪ್ರಮುಖವಾದುದ್ದಾಗಿದ್ದು ಅಷ್ಟರೊಳಗೆ ಕಾಂಗ್ರೆಸ್ ಪಕ್ಷವನ್ನು ದೇಶದಲ್ಲಿ ಸದೃಢಗೊಳಿಸಬೇಕು. ಇ.ವಿ.ಎಂ. ಬಗ್ಗೆ ತಮಗೇ ಮೊದಲಿನಿಂದಲೂ ಅನುಮಾನ ಇದ್ದು ಈಗಲೂ ಸಹ ಅನುಮಾನ ಇದೆ. ಇ.ವಿ.ಎಂ. ತಿರುಚುವ ತಂತ್ರಜ್ಞಾನವನ್ನು ಬಿಜೆಪಿಯವರು ಇಟ್ಟುಕೊಂಡಿದ್ದಾರೆ. ಬೇರೆ ಬೇರೆ ದೇಶದಿಂದ ಅದನ್ನು ಆಪರೇಟ್ ಮಾಡುತ್ತಾರೆ ಎಂದು ಕೇಳಿದ್ದು, ಅನೇಕ ಬಾರಿ ಆ ಗುಮಾನಿ ತಮಗೂ ಸಹ ಬಂದಿದೆ. ತಂತ್ರಜ್ಞರು ವ್ಯಕ್ತಪಡಿಸುತ್ತರುವ ಅಭಿಪ್ರಾಯ ನೋಡಿದಾಗ ಇ.ವಿ.ಎಂ.ಹ್ಯಾಕ್ ಆಗಿರಬಹುದು ಎನಿಸುತ್ತದೆ. ಆದರೆ ಅದು ಕೇವಲ ಆರೋಪ ಅಷ್ಟೆ ಆಗಿದ್ದು, ಸ್ಪಷ್ಟವಾಗಿ ತಮಗೆ ತಿಳಿದಿಲ್ಲ.

    ಉತ್ತರಪ್ರದೇಶ 80 ಲೋಕಸಭಾ ಸದಸ್ಯರಿರುವ ರಾಜ್ಯ ಹಾಗಾಗಿ ರಾಜ್ಯದಲ್ಲಿ ಪಕ್ಷ ಆಡಳಿತಕ್ಕೆ ಬಂದರೆ  ಸಂಸತ್ ಚುನಾವಣೆ ಸುಲಭವಾಗಿ ಗೆಲ್ಲಬಹುದಾಗಿದೆ. ಹಾಗಾಗಿ ಇ.ವಿ‌.ಎಂ.ಹ್ಯಾಕ್ ಆಗಿರುವ ಬಗ್ಗೆ ಎಲ್ಲರಿಗೂ ಅನುಮಾನ ಮೂಡುತ್ತದೆ ಹಾಗಾಗಿ ಬ್ಯಾಲೆಟ್ ಪೇಪರ್ ಪದ್ದತಿ ಮತ್ತೆ ತರಬೇಕೆಂದು ತಾವು ಒತ್ತಾಯಿಸುವುದಾಗಿ ತಿಳಿಸಿದರು.

    ಡಿ.ಕೆ.ಶಿ.ಸ್ವಾತಂತ್ರ್ಯರಾಗಿದ್ದಾರೆ:      

    ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ವಾತಂತ್ರಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರ ಮೇಲೆ ಯಾರ ನಿಯಂತ್ರಣವೂ ಇಲ್ಲ. ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪಕ್ಷದ ಪರವಾಗಿ ತೆಗೆದುಕೊಳ್ಳಬೇಕಾದ ಎಲ್ಲ ನಿರ್ಣಯಗಳನ್ನು ಎಲ್ಲರ ಬಳಿ ಚರ್ಚೆ ಮಾಡಿ ತೆಗೆದುಕೊಳ್ಳುತ್ತಾರೆ. ಮೇಕೆದಾಟು ಪಾದಯಾತ್ರೆ ಯೋಜನೆ ರೂಪಿಸುವ ಸಂದರ್ಭದಲ್ಲೂ ಸಹ ಎಲ್ಲರೊಂದಿಗೆ ಚರ್ಚೆ ಮಾಡಿದ್ದಾರೆ. ಎಲ್ಲ ನಾಯಕರೂ ಸಹ ಪಾದಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಿದ್ದಾರೆ. ಎಲ್ಲ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಿ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕಿದೆ ಎಂದು ತಿಳಿಸಿದರು.

    ವರದಿ: ರಾಜೇಶ್ ರಂಗನಾಥ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ತುಮಕೂರು ದಸರಾ ಉತ್ಸವದ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಿಂದ…

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.