ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ನಡೆಯುತ್ತಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ನಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು.
ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಡಾ.ವಿ.ಐ.ಪಾಟೀಲ್, ಹೆಚ್.ಎಸ್.ಶಿವಶಂಕರ್ ಅವರು, ಪ್ರತಿಭಟನಾನಿರತ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೀಸಲಾತಿ ವಿಷಯದಲ್ಲಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 21ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ಹೀಗಾಗಿ ನಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx