ಬೆಳಗಾವಿ: ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಹಿಂಸೆಗೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನ ಚದುರಿಸಿದ್ದಾರೆ.
2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು, ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಪ್ರತಿಭಟನಾಕಾರರ ಗುಂಪು ಯತ್ನಿಸಿದ್ದಾರೆ. ಆ ವೇಳೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ.
ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಂತೆ ಹೋರಾಟಗಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಮತ್ತೊಂದೆಡೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಧರಣಿಗೆ ಶಾಸಕರಾದ ಯತ್ನಾಳ್, ಅರವಿಂದ್ ಬೆಲ್ಲದ್ ಸಾಥ್ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx