ಬೆಳಗಾವಿ : ಪಂಚಮಸಾಲಿ ಹೋರಾಟ ಅಂತಿಮ ಹಂತ ತಲುಪಿದ್ದು, 2 ಎ ಮೀಸಲಾತಿ ನೀಡುವಲ್ಲಿ ಸರ್ಕಾರ ವಿಳಂಬ ನೀತಿ ತೋರುತ್ತಿರುವುದನ್ನು ಖಂಡಿಸಿ 25 ಲಕ್ಷ ಜನರಿಂದ ಡಿಸೆಂಬರ್ 12 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಹುಕ್ಕೇರಿಯಲ್ಲಿ ಹಮ್ಮಿಕೊಂಡ ಪಂಚಮಸಾಲಿ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ 2ಎ ಮೀಸಲಾತಿ ಹೋರಾಟ ಕೆಲವೇ ದಿನಗಳಲ್ಲಿ ತಾರ್ಕಿಕ ಅಂತ್ಯ ಕಾಣಲಿದೆ. ಶೇ 82ರಷ್ಟು ಬಹುಸಂಖ್ಯಾತ ಪಂಚಮಸಾಲಿ ಸಮಾಜದವರು ಅಧಿಕಾರದಿಂದ ವಂಚಿತರಾಗಿದ್ದಾರೆ.
ಪಂಚಮಸಾಲಿ ಹೃದಯವಂತ ಸಮಾಜ, ನಾನು ಪೀಠಾಧ್ಯಕ್ಷನಾದ ಬಳಿಕ ಎಂದೆಂದಿಗೂ ಯಾರೂ ಏನನ್ನೂ ಕೇಳಿಲ್ಲ. ಮೀಸಲಾತಿ ಸಿಗೋವರೆಗೂ ಏನೂ ಬೇಡ, ಹೋರಾಟಕ್ಕೆ ಬನ್ನಿ ಎಂದು ಕರೆ ಕೊಟ್ಟಿದ್ದೇನೆ ಎಂದು ತಿಳಿಸಿದರು.
2ಎ ಮೀಸಲಾತಿಗೆ ಆಗ್ರಹಿಸಿ ಸರ್ಕಾರಕ್ಕೆ ಕೊಟ್ಟ ಗಡುವು ಮುಗಿದು ಹೋಗಿದೆ. ಸರ್ಕಾರ ನಾಲ್ಕು ಬಾರಿ ಮಾತು ಕೊಟ್ಟು ಮರಿದು ಕೊಂಡಿದೆ. ಹೀಗಾಗಿ, ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಿದ್ದೇವೆ. ಈಗ ಮೀಸಲಾತಿ ಹೋರಾಟ ವಿಳಂಬ ಆಗ್ತಿದೆ.
ಎಸ್ಸಿ ಎಸ್ಟಿ ಸಮಾಜಕ್ಕೆ ಮೀಸಲಾತಿ ಕೊಟ್ಟಂತೆ ನಮಗೂ ಮೀಸಲಾತಿ ಕೊಡಬೇಕು. ಚುನಾವಣೆ ಬರುವ ಮುಂಚೆ ಮೀಸಲಾತಿ ಘೋಷಣೆ ಮಾಡಬೇಕು. ಮುಖ್ಯಮಂತ್ರಿಗಳಿಗೆ ಕಳಕಳಿ ಇದ್ದರೆ ಮೀಸಲಾತಿಯನ್ನು ಕೂಡಲೇ ಘೋಷಿಸಲಿ ಎಂದು ಸವಾಲು ಹಾಕಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


