nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    ತುಮಕೂರು July 9, 2026

    ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ

    By adminJuly 9, 2026No Comments3 Mins Read
    panchayat.jpg

    ತುಮಕೂರು: ಗ್ರಾಮಗಳಲ್ಲಿ ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ನೂತನ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದ್ದು, ಅದನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೂಚಿಸಿದರು.

    ಅವರು ಜಿಪಂ ವತಿಯಿಂದ ಹಮ್ಮಿಕೊಂಡಿರುವ ಗ್ರಾಮ ಪಂಚಾಯತಿಗಳಿಗೆ ನೂತನವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

    ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನೆರವೇರಿಸುವುದಾಗಿ ಸಿಎಂ ಸಹ ತಿಳಿಸಿದ್ದು, ಅಲ್ಲಿಯವರೆಗೆ ಗ್ರಾಮ ಪಂಚಾಯಿತಿಗಳ ಆಡಳಿತವನ್ನು ಪಾರದರ್ಶಕ, ಸಮಾನವಾಗಿ ನಡೆಸಿಕೊಂಡು ಹೋಗುವ ಮಹತ್ವದ ಹೊಣೆ ಆಡಳಿತಾಧಿಕಾರಿಗಳು, ಪಿಡಿಒ, ಕಾರ್ಯದರ್ಶಿಗಳ ಮೇಲಿರುತ್ತದೆ. ಹಳ್ಳಿಗಳಲ್ಲಿ ಕುಡಿಯುವ ನೀರು ಸೇರಿದಂತೆ ನಾಗರಿಕ ಸೌಲಭ್ಯಗಳ ಬಳಕೆ ವಿಷಯವಾಗಿ ತಾರತಮ್ಯ, ಜನಾಂಗೀಯ ಸಂಘರ್ಷಗಳು ನಡೆಯುತ್ತಿರುತ್ತವೆ. ಅಸಮಾನತೆ ಆಚರಣೆ, ಶಾಂತಿಗೆ ಭಂಗ ತರುವ ಘಟನೆಗಳಿಗೆ ಆಸ್ಪದ ಕೊಡದಂತೆ ಎಚ್ಚರಿಕೆ ವಹಿಸಬೇಕೆಂದು ನಿರ್ದೇಶಿಸಿದರು.

    ಗ್ರಾಮ ಪಂಚಾಯತಿ ಪರಿಕಲ್ಪನೆ ಮಹಾತ್ಮ ಗಾಂಧೀಜಿ ಅವರದ್ದಾಗಿದ್ದು, ನಮ್ಮ ಆಡಳಿತವನ್ನು ನಾವೇ ಮಾಡಿಕೊಳ್ಳಬೇಕು ಎಂಬುದು ಈ ಸರಳ ತತ್ವದ ಉದ್ದೇಶ. ಸ್ವಾತಂತ್ರ್ಯ ನಂತರ ಸಂವಿಧಾನದಲ್ಲಿ ಅಳವಡಿಸಿಕೊಂಡು ಅಧಿಕಾರ ವಿಕೇಂದ್ರೀಕರಣಗೊಳಿಸಲಾಯಿತಾದರೂ ಹಣದ ವಿಕೇಂದ್ರೀಕರಣ ಎಂಬ ಆರೋಪಕ್ಕೆ ಗುರಿಯಾಗಿತ್ತು. ನಂತರದಲ್ಲಿ ಧನಾತ್ಮಕ ಬದಲಾವಣೆಯೊಂದಿಗೆ 3 ಹಂತದ ಪಂಚಾಯತ್ ವ್ಯವಸ್ಥೆ ಇಡೀ ಜಗತ್ತಿಗೆ ಮಾದರಿಯಾಯಿತು. 1993-94ರಲ್ಲಿ ಪಂಚಾಯತ್ರಾಜ್ ಕಾಯ್ದೆಗೆ ಸಾಂವಿಧಾನಿಕ ತಿದ್ದುಪಡಿ ತಂದು ಅತ್ಯಂತ ಪರಿಣಾಮಕಾರಿಯಾಗಿ ದೇಶಾದ್ಯಂತ ಅನುಷ್ಠಾನಗೊಳಿಸಲಾಯಿತು. ಕರ್ನಾಟಕದ ಪಂಚಾಯತ್ರಾಜ್ ಗ್ರಾಮಸ್ವರಾಜ್ ವ್ಯವಸ್ಥೆ ಇಡೀ ದೇಶಕ್ಕೆ ಮಾದರಿಯಾಗಿ ಹೆಸರು ಪಡೆದಿದ್ದು, ಎಸ್.ಎಂ.ಕೃಷ್ಣ ಅವರು ಸಿಎಂ ಆಗಿದ್ದಾಗ ಪಂಚಾಯಿತಿಗಳಲ್ಲಿ ತಾಂತ್ರಿಕ ವ್ಯವಸ್ಥೆ ಅಳವಡಿಸಿಕೊಳ್ಳಲು ಕಾರಣಕರ್ತರಾದರು. ಪಂಚಾಯತ್ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳುವುದರಿಂದ ಕಾರ್ಯ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಜೊತೆಗೆ ಪರಿಣಾಮಕಾರಿ ಆಡಳಿತ ನೀಡಬಹುದಾಗಿದೆ ಎಂದರು.

    ತುಮಕೂರು ಮಾದರಿ: ಭಾಷಣದ ಆರಂಭದಲ್ಲಿ ವಿರೋಧ ಭುವನ ಸಾವಿಗೆ ಶೋಕ ವ್ಯಕ್ತಪಡಿಸಿದ ಸಚಿವರು, ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒ ಅವರನ್ನೊಳಗೊಂಡಂತೆ ಜಿಲ್ಲೆಯ ಬಹುತೇಕ ಅಧಿಕಾರಿಗಳು ಶ್ರಮದಿಂದಾಗಿ ತುಮಕೂರು ಜಿಲ್ಲೆ ಆಡಳಿತ ವಿಚಾರದಲ್ಲಿ ಮಾದರಿಯೆನಿಸಿದೆ. ತುಮಕೂರಿನಲ್ಲಿ ಆಯೋಜಿಸಿದ್ದ ಸರ್ಕಾರದ ಸಾಧನಾ ಸಮಾವೇಶವನ್ನು ರಾಜ್ಯಾದ್ಯಂತ ಅನುಸರಿಸುವಂತೆ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಜಿಲ್ಲೆಗೂ ಪತ್ರ ಬರೆದಿದ್ದರು. ಇದರ ಕ್ರೆಡಿಟ್ ಪ್ರತಿಯೊಬ್ಬ ಸಿಬ್ಬಂದಿಗೂ ಸಲ್ಲಬೇಕು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ ನುಡಿದರು.

    ಸವಲತ್ತು ವಿತರಣೆ: ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಪಂಚಾಯಿತಿ ಸಿಬ್ಬಂದಿಗೆ ಖಾಯಾತಿ ಪತ್ರ, ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಯೋಜನೆಯಡಿ ಕಣ್ಣಿನ ದೋಷವುಳ್ಳ ಮಕ್ಕಳು ಹಿರಿಯ ನಾಗರಿಕರಿಗೆ ಕನ್ನಡಕ, ಶ್ರವಣ ಸಾಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮೀಡಿಯಾ ಕಿಟ್ ಅನ್ನು ಡಿಸಿಎಂ ಡಾ.ಜಿ.ಪರಮೇಶ್ವರ, ಶಾಸಕ ಟಿ.ಬಿ.ಜಯಚಂದ್ರ ಇತರ ಗಣ್ಯರು ವಿತರಿಸಿದರು.

    ವಿಳಂಬವಿಲ್ಲದೆ ಲಾಗಿನ್ ಅಪ್ರೂವಲ್ ಮಾಡಿ:

    ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಮಾತನಾಡಿ ಇ ಆಡಳಿತ ವ್ಯವಸ್ಥೆಯಲ್ಲಿ ಲಾಗಿನ್ ಅಪ್ರೂವಲ್ಗೆ ಕಾಲಮಿತಿ ಹಾಕಿಕೊಳ್ಳದಿರುವುದು ಸಾರ್ವಜನಿಕ ಕಡತ ವಿಲೇವಾರಿಗೆ ವಿಳಂಬವಾಗುತ್ತಿದೆ ಎಂದ ಅವರು, ಕೆಳಹಂತದಿಂದ ಮೇಲಿನ ಹಂತದವರೆಗೆ ಲಾಗಿನ್ ಅಪ್ರೂವಲ್ ತಡೆರಹಿತವಾಗಿ ನಡೆಯಬೇಕು. ಪಾರದರ್ಶಕ ಆಡಳಿತ ದೃಷ್ಟಿಯಿಂದ ಇಂತಹ ತರಬೇತಿಗಳು ಪೂರಕವಾಗುತ್ತವೆ ಎಂದರು.

    ಸುಗಮ ಆಡಳಿತಕ್ಕಾಗಿ ತರಬೇತಿ: ಜಿಪಂ ಸಿಇಒ

    ಜಿಪಂ ಸಿಇಒ ಬಿ.ವಿ. ಅಶ್ವಿಜ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಸದ್ಯ 3 ಹಂತದ ಪಂಚಾಯತ್ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದಿರುವುದರಿಂದ ಗ್ರಾಮ ಪಂಚಾಯಿತಿಗಳಿಗೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ಸುಗಮ ಆಡಳಿತ ನಿರ್ವಹಣೆಗೆ ಅಗತ್ಯ ತರಬೇತಿ ಅಗತ್ಯವಿತ್ತು. ಇದನ್ನು ಮನಗಂಡು 3 ದಿನಗಳ ತರಬೇತಿ ಹಮ್ಮಿಕೊಂಡು ಪರಿಣಿತ ಸಂಪನ್ಮೂಲ ವ್ಯಕ್ತಿಗಳಿಂದ ಪಂಚಾಯತ್ ಅಧಿಕಾರಿ ಸಿಬ್ಬಂದಿಗೆ ತರಬೇತಿ ಕೊಡಿಸಲಾಗುತ್ತಿದೆ. ಈ ತರಬೇತಿಯೊಟ್ಟಿಗೆ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆದವರು, ಗ್ರಾಮಸೇವಕರು, ಜವಾನರು, ಕರವಸೂಲಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದವರಿಗೆ ಸೇವಾಕಾಯಮಾತಿ ಮಾಡಿ ಪ್ರಮಾಣಪತ್ರ ವಿತರಿಸುತ್ತಿದ್ದು, ಅವರಿಗೆಲ್ಲ ಉದ್ಯೋಗ ಭದ್ರತೆ ಸಿಕ್ಕಂತಾಗಿದೆ ಎಂದರು.

    ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಮಹಾಲೇಖಪಾಲ ಕಚೇರಿಯ ಸಂಪನ್ಮೂಲ ವ್ಯಕ್ತಿ ರಂಜನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ಈಶ್ವರಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಮುಖ್ಯ ಯೋಜನಾಧಿಕಾರಿ ಸಣ್ಣಮುಸಿಯಪ್ಪ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.