ಪಂಜಾಬ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ನ ಆರನೇ ಸೆಮಿಸ್ಟರ್ ವಿದ್ಯಾರ್ಥಿ ನವಜೋತ್ ಸಿಂಗ್ (20) ಕೊಲೆಯಾದವರು. ಈ ವೇಳೆ ಹೊರಗಿನಿಂದ ಹಲವರು ಆಗಮಿಸಿದ್ದು, ವಾಗ್ವಾದ ನಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಶರ್ಮಾ ತಿಳಿಸಿದ್ದಾರೆ.
ಈ ದಾಳಿಯಲ್ಲಿ ನವಜೋತ್ ಸಿಂಗ್ ಅವರಿಗೆ ಅನೇಕ ಇರಿತದ ಗಾಯಗಳಾಗಿವೆ. ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50s


